ಮುಂಡೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಉದ್ಘಾಟನೆ
ಪುತ್ತೂರು: ಮುಳಿಯ ಪ್ರತಿಷ್ಠಾನದ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗಾಗಿ ರಂಗಿತರಂಗ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದ್ದು, ಇದರ ಉದ್ಘಾಟನೆ ಇಂದು ಮುಂಡೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೆರವೇರಿತು. ಜ್ಯುವೆಲ್ಸ್ ಈ ಸ್ಫರ್ಧೆಯನ್ನು ಪ್ರಸ್ತುತ ಪಡಿಸುತ್ತಿದೆ.
ಕಲೆ, ಸಂಸ್ಕೃತಿಗಳಿಗೆ ಪ್ರೋತ್ಸಾಹ, ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣಕ್ಕೆ ಉತ್ತೇಜನ ನೀಡಲು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವ ಪುತ್ತೂರಿನ ಮುಳಿಯ ಜ್ಯುವೆಲ್ಸ್ ಈ ವರ್ಷ ಶಾಲಾ ವಿದ್ಯಾರ್ಥಿಗಳಿಗಾಗಿ ಸರಣಿ ಚಿತ್ರಕಲಾ ಸ್ಪರ್ಧೆಗಳನ್ನು ಆಯೋಜಿಸುತ್ತಿದೆ.
ವಿವಿಧ ಶಾಲೆಗಳಲ್ಲಿ ರಂಗಿತರಂಗ ಚಿತ್ರಕಲಾ ಸ್ಪರ್ಧೆ ಹೆಸರಿನ ಸರಣಿ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದ್ದು, ಶಾಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಸೆಮಿ ಫೈನಲ್ ಮತ್ತು ನಂತರದ ಫೈನಲ್ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ಪಡೆದುಕೊಳ್ಳುತ್ತಾರೆ.
'ಪ್ರಕೃತಿಯ ಭವಿಷ್ಯದ ಮೇಲೆ ಭರವಸೆಯ ಗುರುತು' ಎಂಬ ಘೋಷವಾಕ್ಯದ ಅಡಿಯಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ಪರಿಸರ ವಿಷಯವನ್ನು ನಿಗದಿಪಡಿಸಲಾಗಿದೆ. ಅದೇ ರೀತಿ 6ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ವಿಷಯದ ಮೇಲೆ ಚಿತ್ರಗಳನ್ನು ಬಿಡಿಸಲು ಸೂಚಿಸಲಾಗುತ್ತದೆ.
ಪರಿಸರ ಪ್ರೇಮದ ಕುರಿತಾಗಿ ಪ್ರತಿಯೊಬ್ಬ ವಿದ್ಯಾರ್ಥಿಯು ರಚಿಸಿದ ಸುಂದರವಾದ ಚಿತ್ರಗಳನ್ನು ಪ್ರೋತ್ಸಾಹಿಸಲು ಪುತ್ತೂರು ತಾಲೂಕಿನ ವಿವಿಧ ಶಾಲೆಗಳಲ್ಲಿ ಈ ಸ್ಪರ್ಧೆ ನಡೆಯಲಿದೆ.
ಫೈನಲ್ ಸುತ್ತನ್ನು 2024ರ ಮಾರ್ಚ್, ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ (ಪರೀಕ್ಷೆಗಳ ನಂತರ) ನಡೆಸಲಾಗುತ್ತದೆ. ಭಾಗವಹಿಸುವ ಪ್ರತಿಯೊಬ್ಬ ವಿದ್ಯಾರ್ಥಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದವರಿಗೆ ಪದಕ ನೀಡಿ ಗೌರವಿಸಲಾಗುವುದು ಎಂದು ಮುಳಿಯ ಜ್ಯುವೆಲ್ಸ್ ಪ್ರಕಟಣೆ ತಿಳಿಸಿದೆ.
ಮುಳಿಯ ರಂಗಿತರಂಗ್ ಚಿತ್ರ ಕಲಾ ಸ್ಪರ್ಧೆಯ ಉದ್ಘಾಟನಾ ಕಾರ್ಯಕ್ರಮವು ಇಂದು (ಜು.4 ಮಂಗಳವಾರ) ಮುಂಡೂರು ಶಾಲೆಯಲ್ಲಿ ನಡೆಯಿತು. ಸ್ಪರ್ಧೆಯಲ್ಲಿ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ವಾಟರ್ ಕಲರ್ ಅಥವಾ ಪೆನ್ಸಿಲ್ ಡ್ರಾಯಿಂಗ್ ಮಾಡಲು ಅವಕಾಶವಿದೆ. ಚಿತ್ರಗಳನ್ನು ವ್ಯಕ್ತಪಡಿಸಿರುವ ಪರಿಕಲ್ಪನೆಗಳ ಆಧಾರದ ಮೇಲೆ ನಿರ್ಣಯಿಸಲಾಗುತ್ತದೆ.
ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಶೀಟ್ಗಳನ್ನು ನೀಡಲಾಗುತ್ತದೆ. ಸ್ಪರ್ಧೆಗೆ ಬೇಕಾಗುವ ಇತರ ವಸ್ತುಗಳನ್ನು ವಿದ್ಯಾರ್ಥಿಗಳೇ ಸ್ವತಃ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ.
ಚಿತ್ರವು ಆದಷ್ಟು ಸ್ವಂತಿಕೆಯನ್ನು ಪ್ರತಿಬಿಂಬಿಸುವಂತಿರ ಬೇಕು ಮತ್ತು ಬೇರೆ ಯಾವುದೇ ಮೂಲದ ನಕಲು ಆಗಿರಬಾರದು.
ಹೆಚ್ಚಿನ ಮಾಹಿತಿಗಾಗಿ ಆನಂದ್ (9611501916) ಅಥವಾ ಪ್ರವೀಣ್ (9743175916) ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ಕೋರಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ