ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕಿ ರಾಜಲಕ್ಷ್ಮೀ ಪ್ರಭು ಪಿ ಅವರು 'ಒಪೀನಿಯನ್ ಮೈನಿಂಗ್ ಆಂಡ್ ಸೆಂಟಿಮೆಂಟ್ ಎನಾಲಿಸಿಸ್ ಆಫ್ ಲಾರ್ಜ್ ಸ್ಕೇಲ್ ಡಾಟಾ ಯುಸಿಂಗ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಟೆಕ್ನಿಕ್ಸ್' ಎಂಬ ವಿಷಯದ ಬಗೆಗೆ ಮಂಡಿಸಿದ ಸಂಶೋಧನಾ ಪ್ರಭಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ನೀಡಿದೆ.
ಇವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥೆ ಡಾ. ಸೀಮಾ ಎಸ್ ಅವರ ಮಾರ್ಗದರ್ಶನದಲ್ಲಿ ಈ ಸಂಶೋಧನೆಯನ್ನು ನಡೆಸಿದ್ದರು. ಇವರು ಬಿ.ಸಿ ರೋಡ್ ನ ಬಿ ರಾಧಾಕೃಷ್ಣ ಪ್ರಭು ಹಾಗೂ ಸುಮನಾ ಪ್ರಭು ಅವರ ಮಗಳು, ನಿಟ್ಟೆ ತಾಂತ್ರಿಕ ಕಾಲೇಜಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಸಂದೀಪ್ ಕುಮಾರ್ ಹೆಗ್ಡೆ ಅವರ ಪತ್ನಿ ಹಾಗೂ ಅಜೆಕಾರಿನ ಶಿವರಾಯ ಹೆಗ್ಡೆ ಹಾಗೂ ಶೋಭಾ ಹೆಗ್ಡೆ ಅವರ ಸೊಸೆಯಾಗಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ