ಪುತ್ತೂರು: ಖಿದ್ಮಾ ಫೌಂಡೇಶನ್ ಕರ್ನಾಟಕ ವತಿಯಿಂದ ಜೂ.17ರಂದು ಅಯೋಜಿಸಲಾಗಿದ್ದ ರಾಜ್ಯಮಟ್ಟದ ಕವನ ಸ್ವರ್ಧೆಯಲ್ಲಿ ಭಾಗವಹಿಸಿ ನಾರಾಯಣ ಕುಂಬ್ರರವರು ಖಿದ್ಮಾ ರಾಜ್ಯಮಟ್ಟದ ಕವಿಗೋಷ್ಠಿಗೆ ಅಯ್ಕೆಯಾಗಿದ್ದಾರೆ. ಈ ಸ್ಪರ್ಧೆಯಲ್ಲಿ ರಾಜ್ಯದ 111 ಕವಿಗಳು ಭಾಗವಹಿಸಿದ್ದರು. ಇವರು ಜುಲೈ 9ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಖಿದ್ಮಾ ಫೌಂಡೇಶನ್ ಕರ್ನಾಟಕ ಅಯೋಜನೆ ಮಾಡುವ ರಾಜ್ಯಮಟ್ಟದ ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮಾಡಲಿದ್ದಾರೆಂದು ಖಿದ್ಮಾ ಫೌಂಡೇಶನ್ ರಾಜ್ಯ ಸಂಚಾಲಕ ಅಮಿರ್ ಬನ್ನೂರು ತಿಳಿಸಿದ್ದಾರೆ.
ಪ್ರಸ್ತುತ ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ರಸಾಯನ ಶಾಸ್ತ್ರ ವಿಭಾಗದ ಪ್ರಯೋಗಾಲಯ ಸಹಾಯಕರಾಗಿದ್ದು, ಕ.ಸಾ.ಪ ಪುತ್ತೂರು ಇದರ ಗ್ರಾಮ ಸಾಹಿತ್ಯ ಸಂಭ್ರಮದ ಸಂಚಾಲಕರಾಗಿ, ಚಿಗುರೆಲೆ ಸಾಹಿತ್ಯ ಬಳಗ ಪುತ್ತೂರು ಇದರ ಕಾರ್ಯಕ್ರಮ ಸಂಯೋಜಕರಾಗಿರುತ್ತಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ