ದ.ಕ ಜಿಲ್ಲಾ ಕಸಾಪ ವತಿಯಿಂದ ಶಾಲೆಗಳಲ್ಲಿ ಸಾಹಿತ್ಯ ಪ್ರೇರಣಾ ಕಾರ್ಯಕ್ರಮ

Upayuktha
0

ಮಂಗಳೂರು: ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ, ದ.ಕ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ದಯಾನಂದ ರಾಮಚಂದ್ರ ನಾಯ್ಕ್ ರವರನ್ನು ಭೇಟಿಯಾಗಿ ದ.ಕ ಜಿಲ್ಲೆಯ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಸಾಹಿತ್ಯ ಪ್ರೇರಣಾ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತಾಗಿ, ಶಿಕ್ಷಣ ಇಲಾಖೆಯ ಮೂಲಕ ಮಾರ್ಗದರ್ಶನ ನೀಡಲು ಮನವಿ ಪತ್ರವನ್ನು ನೀಡಲಾಯಿತು.


ನಮ್ಮ ನಾಡು ನುಡಿ ಸಂಸ್ಕೃತಿಯ ಉಳಿಸುವ ಮತ್ತು ಬೆಳೆಸುವಲ್ಲಿ ಕನ್ನಡ ಭಾಷೆಯೇ ಆಧಾರ. ಈ ನಿಟ್ಟಿನಲ್ಲಿ ಭಾಷೆಯ ಸಬಲೀಕರಣಕ್ಕೆ, ದ.ಕ ಜಿಲ್ಲೆಯಾದ್ಯಂತ ಪ್ರತೀ ಶಾಲೆಗಳಲ್ಲಿ, ವರ್ಷದಲ್ಲಿ ಕನಿಷ್ಠ ಒಂದಾದರೂ ಕನ್ನಡ ಪರ ಸಾಹಿತ್ಯಿಕ ಕಾರ್ಯಕ್ರಮಗಳನ್ನು ಆಯೋಜಿಸಬೇಕೆಂಬ ಮನವಿ ಮಾಡಿಕೊಳ್ಳಲಾಯಿತು.


ಸಾಹಿತಿಗಳ ಪರಿಚಯ, ಸಾಹಿತ್ಯಿಕ  ಉಪನ್ಯಾಸ, ವಾಚನಾಲಯ ಬಳಕೆ, ಕತೆ ಕವನ ಬರವಣಿಗೆ ಕಮ್ಮಟ,  ಕನ್ನಡ ಗೀತೆಗಳ ಗಾಯನ ಮುಂತಾದ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಚರ್ಚಿಸಲಾಯಿತು.


ಈ ಬಗ್ಗೆ ಕ್ರಮ ವಹಿಸುವ ಬಗ್ಗೆ ಆಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲೆ ಶಾಲೆಗಳಿಗೆ ಸೂಕ್ತ ನಿರ್ದೇಶನ ನೀಡುವ ಬಗ್ಗೆ ಉಪನಿರ್ದೇಶಕರು ಭರವಸೆ ನೀಡಿದರು. ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ ಶ್ರೀನಾಥ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಸನತ್ಕುಮಾರ ಜೈನ್ ರವರು ಈ ಮನವಿಯನ್ನು ಉಪನಿರ್ದೇಶಕರಿಗೆ ಸಲ್ಲಿಸಿದರು. 


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top