ಪುತ್ತೂರು: ಜುಲೈ 26ರಂದು ಕಾರ್ಗಿಲ್ ವಿಜಯ ದಿವಸ್ ಆಚರಣೆ

Chandrashekhara Kulamarva
0


ಪುತ್ತೂರು:
ನಗರದ ಕಿಲ್ಲೆ ಮೈದಾನದ ಬಳಿ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ನಿರ್ಮಿಸಲ್ಪ್ಪಟ್ಟಿರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಜುಲೈ 26ರಂದು ಬೆಳಗ್ಗೆ 9 ಗಂಟೆಗೆ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ ನಡೆಯಲಿದೆ. 


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಮಾಜಿ ಸೈನಿಕರ ಸಂಘ ಹಾಗೂ ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಸಹಯೋಗದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ.ನಾರಾಯಣ ಭಟ್ (Ex- petty officer, Indian Navy) ಅಧ್ಯಕ್ಷತೆ ವಹಿಸಲಿದ್ದಾರೆ. ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ಸಹಾಯಕ ಆಯುಕ್ತ ಗಿರೀಶ್ ನಂದನ್, ಉಡುಪಿಯ ವಾಗ್ಮಿ ಶ್ರೀಕಾಂತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. 


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ, ಕೋಶಾಧಿಖಾರಿ ರಾಜಶ್ರೀ ಎಸ್ ನಟ್ಟೋಜ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top