ಶಿಕ್ಷಣದ ಉದ್ದೇಶ ಜ್ಞಾನಾರ್ಜನೆಯೇ ಹೊರತು ಧನಾರ್ಜನೆಯಲ್ಲ: ಸುಬ್ರಹ್ಮಣ್ಯ ನಟ್ಟೋಜ

Upayuktha
0

       ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಹೆತ್ತವರ ಸಭೆ

ಪುತ್ತೂರು: ಶಿಕ್ಷಣ ಎನ್ನುವುದು ಜ್ಞಾನಾರ್ಜನೆಗೆ ಇರುವುದೇ ಹೊರತು ಧನಾರ್ಜನೆಗಾಗಿ ಅಲ್ಲ. ಧನಾರ್ಜನೆಗಾಗಿ ಮಕ್ಕಳನ್ನು ತಯಾರು ಮಾಡಿದರೆ ಅವರು ನಾಳೆ ನಮ್ಮ ಅಂಕೆಯಲ್ಲಿ ಇರುವುದಿಲ್ಲ. ಡಾಕ್ಟರ್ ಇಂಜಿನಿಯರ್‍ಗಳನ್ನು ತಯಾರು ಮಾಡುವುದಕ್ಕಿಂತ ದೇಶಪ್ರೇಮ ಹೊಂದಿರುವ ನಾಯಕರನ್ನು ತಯಾರು ಮಾಡುವುದೇ ಆದ್ಯತೆಯಾಗಬೇಕು ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.

ಅವರು ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಶನಿವಾರ ನಡೆದ ರಕ್ಷಕ-ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ದಿನೇಶ್ ಕುಮಾರ್ ವೈ ಎ ಮಾತನಾಡಿ ಬದುಕು ತುಂಬಾ ಸುಂದರವಾಗಿದೆ. ವಿದ್ಯಾರ್ಥಿಗಳು ತಮಗೆ ಒದಗಿದ ಅವಕಾಶಗಳನ್ನು ಸರಿಯಾಗಿ ಸದುಪಯೋಗ ಮಾಡಿಕೊಂಡು ಒಳ್ಳೆಯ ಸದ್ವಿಚಾರಿ ನಾಗರಿಕರಾಗಿ ಸಮಾಜದಲ್ಲಿ ಮಾದರಿ ಬದುಕನ್ನು ಕಟ್ಟಿಕೊಳ್ಳಬೇಕು. ಮಕ್ಕಳು ಪೂರ್ಣ ಶ್ರಮವಹಿಸಿ ವಿದ್ಯಾರ್ಜನೆ ಮಾಡಿ ತಮ್ಮ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂಬುದಾಗಿ ಕರೆಯಿತ್ತರು.


ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ನಟ್ಟೋಜ ಮಾತನಾಡಿ ಸಂಸ್ಥೆಯ ಧ್ಯೇಯ, ಉದ್ದೇಶಗಳು, ಸ್ಪರ್ಧಾತ್ಮಕ ಪರೀಕ್ಷೆಗಳ ತರಗತಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು. ಸಂಸ್ಥೆಯ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ ಮಾತನಾಡಿ ಸಂಸ್ಥೆಯ ವಸತಿ ನಿಲಯದ ಕಾರ್ಯಚಟುವಟಿಕೆಗಳ ಬಗ್ಗೆ ಸವಿಸ್ತಾರವಾಗಿ ಹೇಳಿದರು. ಸ್ಪರ್ಧಾತ್ಮಕ ಪರೀಕ್ಷಾ ವಿಭಾಗದ ಸಂಚಾಲಕ ಕಿಶೋರ್ ಭಟ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಬಗ್ಗೆ ಮಾಹಿತಿ ನೀಡಿದರು. ಸಂಸ್ಥೆಯ ಎಸ್ಟೇಟ್ ಮ್ಯಾನೇಜರ್ ರಾಜೇಂದ್ರ ಪ್ರಸಾದ್ ಅವರು ಸಂಸ್ಥೆಯಿಂದ ಕೊಡಮಾಡುವ ಊಟ, ಉಪಹಾರ ಹಾಗೂ ಇತರ ಆಹಾರಗಳ ಬಗ್ಗೆ ಮಾಹಿತಿ ನೀಡಿದರು.


ಕಾರ್ಯಕ್ರಮದಲ್ಲಿ ಉಪ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ ಎಸ್ ಹಾಗೂ ವಸತಿ ನಿಲಯದ ಮುಖ್ಯ ಮೇಲ್ವಿಚಾರಕ ಆಶಿಕ್ ಬಾಲಚಂದ್ರ  ಹಾಗೂ ಎಲ್ಲಾ ಉಪನ್ಯಾಸಕರು ಉಪಸ್ಥಿತರಿದ್ದರು.  ಅತಿಥಿಗಳನ್ನು ಹಾಗೂ ಪೆÇೀಷಕರನ್ನು ಕಾಲೇಜಿನ ಪ್ರಾಂಶುಪಾಲೆ ಸುಚಿತ್ರ ಪ್ರಭು ಸ್ವಾಗತಿಸಿದರು. ಉಪನ್ಯಾಸಕಿ ಅಪರ್ಣ ಉಪಾಧ್ಯಾಯ ವಂದಿಸಿದರು. ಉಪನ್ಯಾಸಕ ನಮ್ರತ್ ಜಿ ಉಚ್ಚಿಲ ಕಾರ್ಯ ಕ್ರಮವನ್ನು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top