ವಲಯ ಮಟ್ಟದ ಚದುರಂಗ ಸ್ಪರ್ಧೆ: ಸುದಾನ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

Upayuktha
0

ಪುತ್ತೂರು: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ಸಹಯೋಗದಲ್ಲಿ ಜುಲೈ 24 ರಂದು ನಡೆದ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಾಥಮಿಕ ಶಾಲಾ ಬಾಲಕರ 14 ರ ವಯೋಮಿತಿಯ ವಿಭಾಗದಲ್ಲಿ 7ನೇ ತರಗತಿಯ ಭಗತ್ ಕೃಷ್ಣ  ಹಾಗೂ ಬಾಲಕಿಯರ ವಿಭಾಗದಲ್ಲಿ ಮೋನಿಕ ಬಿ.ವಿ., ಸಾನ್ವಿತ ಎಂ. ರೈ ಸ್ಪರ್ಧಿಸಿ, ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 8ನೇ ತರಗತಿಯ  ಶೆಲ್ಡನ್ ಸಿಕ್ವೇರಾ ಹಾಗೂ ಬಾಲಕಿಯರ ವಿಭಾಗದಲ್ಲಿ ಯಶ್ವಿ ಜೆ. ಶೆಟ್ಟಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 


17ರ ವಯೋಮಾನದ ಪ್ರೌಢಶಾಲಾ ಬಾಲಕರ ವಿಭಾಗದಲ್ಲಿ 9ನೇ ತರಗತಿಯ ಜೆಸಿತ್. ಸಿ. ಎಸ್  ಹಾಗೂ ಅನಿಷ್ ಎಲ್.ರೈ ಬಾಲಕಿಯರ ವಿಭಾಗದಲ್ಲಿ ಅನಿಕ ಯು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಸಂಚಾಲಕರಾದ ರೆ. ವಿಜಯ ಹಾರ್ವಿನ್, ಮುಖ್ಯ ಶಿಕ್ಷಕಿ ಶ್ರೀಮತಿ. ಶೋಭಾನಾಗರಾಜ್ ರವರು ವಿದ್ಯಾರ್ಥಿಗಳಿಗೆ ಶುಭಹಾರೈಸಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top