ಪುತ್ತೂರು ಸರಕಾರಿ ಆಸ್ಪತ್ರೆಗೆ ರೇಡಿಯಾಲಜಿಸ್ಟ್, ಪ್ರಸೂತಿ ತಜ್ಞರ ನೇಮಕಕ್ಕೆ ಶಾಸಕ ಅಶೋಕ್‌ ಕುಮಾರ್ ರೈ ಒತ್ತಾಯ

Upayuktha
0

ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ



ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಮತ್ತು ಪ್ರಸೂತಿ ವೈದ್ಯರನ್ನು ನೇಮಕ ಮಾಡುವಂತೆ ಆಗ್ರಹಿಸಿ ವಿಧಾನಸಭಾ ಅಧಿವೇಶನದಲ್ಲಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ವಿಷಯ ಪ್ರಸ್ತಾಪಿಸಿದ್ದು ಸರಕಾರಿ ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದಾರೆ.

ಆಸ್ಪತ್ರೆಗೆ ರೇಡಿಯಾಲಜಿಸ್ಟ್ ಅಗತ್ಯವಾಗಿ ಬೇಕಾಗಿದ್ದು, ಆಸ್ಪತ್ರೆಯಲ್ಲಿ ಒಬ್ಬರು ಪ್ರಸೂತಿ ತಜ್ಞರಿದ್ದು ಅವರೇ ಹೆರಿಗೆ ರಜೆ ಮೇಲೆ ತೆರಳಿದ ಕಾರಣ ಹೆರಿಗೆ ಮಾಡಿಸಲು ವೈದ್ಯರಿಲ್ಲದೆ ಸಾರ್ವಜನಿಕರಿಗೆ ತೊಂದರೆಯಾಗಿರುತ್ತದೆ. ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿರುವ ಏಕೈಕ ದೊಡ್ಡ ಸರಕಾರಿ ಆಸ್ಪತ್ರೆಯಗಿರುವ ಕಾರಣ ಸರಕಾರಿ ಆಸ್ಪತ್ರೆಗೆ ಹೆರಿಗೆಗೆ ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗುತ್ತಿದ್ದು ವೈದ್ಯರಿಲ್ಲದ ಕಾರಣ ಸಮಸ್ಯೆ ಉಂಟಾಗಿದೆ. ಸರಕಾರ ತಕ್ಷಣವೇ ನೇಮಕ ವೈದ್ಯರನ್ನು ನೇಮಕ ಮಾಡುವ ಮೂಲಕ ಬೇಡಿಕೆಯನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ. ಅಧಿವೇಶನ ಶೂನ್ಯ ವೇಳೆಯಲ್ಲಿ ಶಾಸಕರು ಈ ಪ್ರಸ್ತಾಪವನ್ನು ಮಾಡಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top