ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನಲ್ಲಿ ಪತ್ರಿಕಾ ದಿನಾಚರಣೆ

Upayuktha
0

ವಿದ್ಯಾರ್ಥಿಗಳಿಗೆ ಜ್ಞಾನ ವೃದ್ಧಿಸಿಕೊಳ್ಳಲು ಪಠ್ಯದ ಜೊತೆಗೆ ಪತ್ರಿಕೆಗಳು ಕೂಡ ಸಹಕಾರಿ: ಪಿ ಬಿ ಹರೀಶ್‍ರೈ

ಪುತ್ತೂರು: ಮಾಧ್ಯಮಗಳು ಉತ್ತಮವಾದ ಶಿಸ್ತು ಮತ್ತು ಸಂಸ್ಕಾರವನ್ನು ಹೊಂದಿರುವ ಸುದ್ದಿಗಳನ್ನು ಸಮಾಜಕ್ಕೆ ನೀಡಬೇಕು. ಮಾಧ್ಯಮದಲ್ಲಿ ತಪ್ಪು ಮಾಹಿತಿಯನ್ನು ನೀಡಿದಾಗ ಪತ್ರಿಕೆ ತನ್ನ ಮಹತ್ವವನ್ನು ಕಳೆದುಕೊಳ್ಳುತ್ತದೆ. ನೈಜ ಸುದ್ದಿಯನ್ನು ಕೊಡುವ ಮಾಧ್ಯಮವಾಗಿ ದಿನಪತ್ರಿಕೆಯನ್ನು ನೋಡಬಹುದುಎಂದು ಮಂಗಳೂರು ಪ್ರೆಸ್‍ಕ್ಲಬ್‍ ಅಧ್ಯಕ್ಷರಾದ ಪಿ ಬಿ ಹರೀಶ್‍ರೈ ಹೇಳಿದರು.


ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜು ಹಾಗೂ  ಪುತ್ತೂರು ತಾಲೂಕು ಕರ್ನಾಟಕ ಪತ್ರಕರ್ತರ ಸಂಘ ಸಂಘದ ಆಶ್ರಯದಲ್ಲಿ ಜುಲೈ 12ರಂದು ನಡೆದ ಪತ್ರಿಕಾ ದಿನಾಚರಣೆ ಮಾಹಿತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾತನಾಡಿ, ವಿದ್ಯಾರ್ಥಿಗಳಿಗೆ ಜ್ಞಾನವನ್ನು ವೃದ್ಧಿಸಿಕೊಳ್ಳಲು ಪಠ್ಯದ ಜೊತೆಗೆ ಪತ್ರಿಕೆಗಳು ಕೂಡ ಸಹಕಾರಿಯಾಗುತ್ತದೆ. ಪತ್ರಿಕೆಯ ಉಗಮ,ಇತಿಹಾಸ ಮತ್ತು ಸ್ವರೂಪದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಿದರು.


ಕಾರ್ಯಕ್ರಮವು ಉದ್ಘಾಟಿಸಿ ಮಾತನಾಡಿದ ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ. ಅಶೋಕ್‍ ರಾಯನ್‍ ಕ್ರಾಸ್ತಾ ಅವರು, ವಿದ್ಯಾರ್ಥಿಗಳು ಪತ್ರಿಕೆಯನ್ನು ಓದುವುದರಿಂದ ಪ್ರಪಂಚದ ಪ್ರಪಂಚದ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ. ಪತ್ರಿಕೆಗಳು ಸಮಾಜದ ಒಳಿತಿಗಾಗಿ ಬೆನ್ನೆಲುಬಾಗಿ ನಿಲ್ಲುವ ಕಾರ್ಯವನ್ನು ಮಾಡಬೇಕು ಎಂದು ಹೇಳಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಪತ್ರಕರ್ತ ಸಂಘ ಮಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಡಾ. ಶಿವಶರಣ್ ಶೆಟ್ಟಿ ಮಾತನಾಡಿ, ಪತ್ರಿಕೋದ್ಯಮವು ಶಿಕ್ಷಣದ ಒಂದು ಭಾಗವಾಗಿದ್ದು, ಶಿಕ್ಷಣದೊಂದಿಗೆ ಜಗತ್ತಿನ ಇತಿಹಾಸವನ್ನು ನಿರ್ಮಿಸಬಲ್ಲ ಶಕ್ತಿಯಾಗಿದೆ. ದಿನಪತ್ರಿಕೆಯನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಷ್ಟೋ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮಾಹಿತಿಯನ್ನು ಪಡೆದುಕೊಳ್ಳಲು ಪತ್ರಿಕೆಗಳು ಉತ್ತಮ ಸೇತುವೆಯಾಗಿದೆಎಂದು ಹೇಳಿದರು.


ಅಧ್ಯಕ್ಷತೆ ವಹಿಸಿದ ಪುತ್ತೂರು ತಾಲೂಕು ಕರ್ನಾಟಕ ಪತ್ರಕರ್ತ ಸಂಘದ ಅಧ್ಯಕ್ಷ ತಿಲಕ್‍ರೈ ಕುತ್ಯಾಡಿ ಮಾತನಾಡಿ, ಕರ್ನಾಟಕ ಪತ್ರಕರ್ತರ ಸಂಘ ಕೆಲಸ ಕಾರ್ಯಗಳು ಸಮಾಜಮುಖಿ ಚಿಂತನೆಯನ್ನು ಒಳಗೊಂಡಿದ್ದು, ವಾಸ್ತವ ಸುದ್ದಿಗಳನ್ನು ಸಮಾಜಕ್ಕೆ ನೀಡುವ ಮೂಲಕ ಸಮಾಜವನ್ನು ಮುನ್ನಡೆಸುವ ಕೈಗನ್ನಡಿಯಂತೆ ಕೆಲಸ ಮಾಡುತ್ತದೆ ಎಂದರು.


ಮಂಗಳೂರು ಕರ್ನಾಟಕ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಸುದೇಶ ಅವರು ಪ್ರಾಸ್ತಾವಿಕ ನೆಲೆಯಲ್ಲಿ ಮಾತನಾಡಿ ದಿನಪತ್ರಿಕೆಗಳನ್ನು ಓದು ಹವ್ಯಾಸಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ದಿನಪತ್ರಿಕೆಗಳಲ್ಲಿ ಎಲ್ಲಾ ವಿಚಾರಗಳನ್ನು ಚರ್ಚಿಸಲಾಗುವುದು. ಸೋಶಿಯಲ್ ಮೀಡಿಯಾದ ಬಳಕೆ ಬಳಕೆಯನ್ನು ವಿದ್ಯಾರ್ಥಿಗಳು ಕಡಿಮೆ ಮಾಡಬೇಕು ಬದಲಾಗಿ ಪತ್ರಿಕೆಗಳನ್ನು ಓದುವ ಹವ್ಯಾಸವನ್ನುಹೆಚ್ಚು ಬೆಳೆಸಿಕೊಳ್ಳಬೇಕು ಎಂದರು. ಮತ್ತು ವಿದ್ಯಾರ್ಥಿಗಳ ಜೊತೆಗೆ ಸಂವಾದವನ್ನು ನಡೆಸಿದರು.


ವೇದಿಕೆಯಲ್ಲಿ ಪುತ್ತೂರು ತಾಲೂಕು ಕರ್ನಾಟಕ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ರೈ ಉಪಸ್ಥಿತರಿದ್ದರು. ಪುತ್ತೂರು ಕರ್ನಾಟಕ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು, ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ ಬೋಧಕ- ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸಿತರಿದ್ದರು.


ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ಉಪನ್ಯಾಸಕರಾದ ಶರತ್‍ ಚನಿಲ ಸ್ವಾಗತಿಸಿದರು. ಪುತ್ತೂರು ತಾಲೂಕು ಕರ್ನಾಟಕ ಪತ್ರಕರ್ತರ ಸಂಘದ ಸದಸ್ಯರು ಹಾಗೂ ಉಪನ್ಯಾಸಕರಾದ ಲಕ್ಷ್ಮೀಕಾಂತ್‍ ಅನಿಕೂಟೇಲ್ ವಂದಿಸಿ, ಉಪನ್ಯಾಸಕಿ ಸುಮನ ಕೆ ಕಾರ್ಯಕ್ರಮವನ್ನು ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top