ಪುತ್ತೂರು: ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ) ಸ್ನಾತಕೋತ್ತರ ವಾಣಿಜ್ಯ ವಿಭಾಗ ಹಾಗೂ ಎಚ್ ಅಂಡ್ ಕೋ ಕಂಪನಿ ಸಹಯೋಗದಲ್ಲಿ ಕ್ಯಾಂಪಸ್ ಸಂದರ್ಶನ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಪ್ರೊ. ವಿಷ್ಣುಗಣಪತಿ ಭಟ್, ಕ್ಯಾಂಪಸ್ ಸಂದರ್ಶನ ವಿದ್ಯಾರ್ಥಿಗಳಿಗೆ ತಮ್ಮ ಕೌಶಲ್ಯವನ್ನು ತೋರ್ಪಡಿಸಿಕೊಳ್ಳುವುದಕ್ಕೆ ಉತ್ತಮ ವೇದಿಕೆಯಾಗಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿದ್ಯಾರ್ಥಿ ನೆಲೆಯಲ್ಲಿಯೇ ಇಂತಹ ಸಂದರ್ಶನಗಳಲ್ಲಿ ಭಾಗವಹಿಸುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕಾರ್ಯಕ್ರಮದ ಅತಿಥಿ ಹಾಗೂ ಎಚ್ ಅಂಡ್ ಕೋ ಕಂಪೆನಿಯ ಲೀಡ್‍ಟ್ಯಾಲೆಂಟ್ ಆಕ್ಕ್ವಿಸಿಶನ್ ಅಶ್ವಿನಿ, ಕಂಪೆನಿಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾಲೇಜಿನ ಎಂಬಿಎ ಮತ್ತು ಎಂಕಾಂ ವಿದ್ಯಾರ್ಥಿಗಳಿಗೆ ಎಚ್ ಅಂಡ್ ಕೋ ಕಂಪೆನಿಯಿಂದ ಸಂದರ್ಶನ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಐಕ್ಯೂಎಸಿ ಘಟಕದ ಸಂಯೋಜಕ ಪ್ರೊ.ಶಿವಪ್ರಸಾದ್ ಇ, ಎಚ್‍ಅಂಡ್ ಕೋ ಕಂಪೆನಿಯ ರಾಜೇಶ್, ಜೈದೀಪ್ ಮತ್ತು ಶಿಲ್ಪಾ, ವಿವೇಕಾನಂದ ಇಂಜಿನಿಯರಿಂಗ್ & ಟೆಕ್ನಾಲಜಿ ಕಾಲೇಜಿನ ಉಪನ್ಯಾಸಕ ಪ್ರೊ.ಆಶ್ಲೇ ಮತ್ತು ಕಾಲೇಜಿನ ವಾಣಿಜ್ಯ ವಿಭಾಗದ ಉಪನ್ಯಾಸಕರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಕಾಲೇಜಿನ ಸ್ನಾತಕೋತ್ತರ ವಿಭಾಗಗಳ ಡೀನ್ ಡಾ. ವಿಜಯ ಸರಸ್ವತಿ ಬಿ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಶ್ವೇತಾರಾವ್ ನಿರೂಪಿಸಿ, ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ