ನಾಳೆ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾಭಾರತಿ ಜಿಲ್ಲಾ ಶೈಕ್ಷಣಿಕ ಸಹಮಿಲನ

Upayuktha
0

ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಥಮಿಕ, ಪೌಢಶಾಲೆ, ಪದವಿಪೂರ್ವ ಕಾಲೇಜು ಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ ಜುಲೈ 22ರಂದು  ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ. ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಮುಳಿಯ ಜುವೆಲ್ಲರ್ಸ್ ಮತ್ತು ಸಮೂಹ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. 


ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಭಾರತೀಯ ಜ್ಞಾನ ಪರಂಪರೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.ಸಮರೋಪ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಭಾಗವಹಿಸಲಿದ್ದಾರೆ.ವಿದ್ಯಾಭಾರತಿ ಕ್ಷೇತ್ರಿಯ ಸಹ ಸಂಘಟನಾ ಕಾರ್ಯದರ್ಶಿ ಜಿ. ಆರ್. ಜಗದೀಶ್ ಸಮಾರೋಪ ಭಾಷಣ ಮಾಡಲಿದ್ದಾರೆ. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top