ವಿವೇಕಾನಂದ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Upayuktha
0


ಪುತ್ತೂರು:
ಜಾತಿಧರ್ಮಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಎಲ್ಲಾ ವರ್ಗದವರು ಸೇರಿ ಪ್ರಜಾಪ್ರಭುತ್ವವಾಗಿ ನಡೆಸುವಂತಹ ಒಂದು ಸಂಸ್ಥೆ ಹಾಗೆಯೇ ಸೇವಾ ಮನೋಭಾವದಿಂದ ಸಂಸ್ಥೆಯ ಏಳಿಗೆಗಾಗಿ ಸಮಯವನ್ನು ಕೊಟ್ಟು ನಡೆಸುವ ಸಂಸ್ಥೆ ಇದಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಮುರಳಿ ಕೃಷ್ಣ ಕೆ.ಎನ್. ಹೇಳಿದರು.


ಇವರು ಇಲ್ಲಿನ  ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಮತ್ತು ಐಕ್ಯೂಎಸಿ ಸಂಯುಕ್ತ ಆಶ್ರಯದಲ್ಲಿ ನಡೆದ ಪದವಿ ಅಧ್ಯಯನಕ್ಕೆ ಸೇರಿದ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಮಾತನಾಡಿ, ಅಂತ:ಸತ್ವ ಎನ್ನುವುದು  ನಮ್ಮಲ್ಲಿ ಅಡಕವಾಗಿರುವಂತದ್ದು. ವಿದ್ಯಾರ್ಥಿಗಳು ಅತ್ಯಂತ ಜಾಗರೂಕತೆಯಿಂದ ನಿರ್ಧಾರವನ್ನು ಕೈಗೊಳ್ಳಬೇಕು. ಹಾಗೆಯೇ ಸತ್ವಯುತವಾದ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಲು ಎಲ್ಲಾ ವಿದ್ಯಾರ್ಥಿಗಳು ಪ್ರಯತ್ನಿಸಬೇಕು ಎಂದು ನುಡಿದರು.


ವೇದಿಕೆಯಲ್ಲಿ ಉಪಸ್ಥಿತರಿದ್ದ ಕಾಲೇಜಿನ  ಪ್ರಾಂಶುಪಾಲ ಪ್ರೊ. ವಿಷ್ಣುಗಣಪತಿ ಭಟ್‍ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಕಾಲೇಜಿನ ಪರೀಕ್ಷಾಂಗ ಕುಲಸಚಿವರು ಮತ್ತು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ಹೆಚ್.ಜಿ. ಸ್ವಾಗತಿಸಿ, ಕಾಲೇಜಿನ ವಿಶೇಷಧಿಕಾರಿ ಮತ್ತುಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯಕ್ ವಂದಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಡಾ. ಮೈತ್ರಿ ಭಟ್ ನಿರೂಪಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
To Top