ದೆಹಲಿಯಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯ,ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಕರಾರು ಒಪ್ಪಂದ ಪತ್ರಕ್ಕೆ ಸಹಿ

Upayuktha
1 minute read
0

ಉಜಿರೆ: ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯ ಮತ್ತು ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಮಧ್ಯೆ ಮೂರು ವರ್ಷಗಳ ಅವಧಿಯ ಕರಾರು ಒಪ್ಪಂದ ಪತ್ರಕ್ಕೆ ಸಹಿ ಮಾಡಲಾಯಿತು. 2023ರ ಅಗೋಸ್ತು ಒಂದರಿಂದ 2026ರ ಜುಲೈ 31ರ ವರೆಗೆ ಕರಾರುಪತ್ರ ಚಾಲ್ತಿಯಲ್ಲಿರುತ್ತದೆ.


ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಕರ್ಮ ಝಿಂಪ ಭಾಟಿಯಾ ಕರಾರು ಪತ್ರಕ್ಕೆ ಸಹಿ ಹಾಕಿದರು.


ಗ್ರಾಮೀಣಾಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ ಶೈಲೇಶ್ ಕುಮಾರ್ ಸಿಂಗ್, ನೇಶನಲ್ ಅಕಾಡೆಮಿ ಆಫ್ ರುಡ್‌ಸೆಟಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಕೆ.ಎನ್. ಜನಾರ್ದನ್, ಜಂಟಿ ನಿರ್ದೇಶಕರು, ಉಪಆಯುಕ್ತರು, ಶಿವಸೋನಿ, ನವೀನ್ ಕುಮಾರ್, ವಿಶಾಲ್ ಗುಪ್ತಾ ಮತ್ತು ಕಾನೂನು ಸಲಹೆಗಾರ ಲೋಕೇಶ್ ಸುಖ್‌ವಾನಿ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top