ರೇಡಿಯೋ ಮಣಿಪಾಲ್‌ನಲ್ಲಿ ಇಂದು ವಿಶೇಷ ಸಂದರ್ಶನ ಪ್ರಸಾರ
ಮಣಿಪಾಲ: ಮಣಿಪಾಲ ಮಾಹೆಯ ಎಂ.ಐ.ಸಿ ಕ್ಯಾಂಪಸ್ ನಲ್ಲಿರುವ ಸಮುದಾಯ ಬಾನುಲಿ ರೇಡಿಯೊ ಮಣಿಪಾಲ್‌ನ 'ವಿಶೇಷ ಸಂದರ್ಶನ ಕಾರ್ಯಕ್ರಮ ಇಂದು (ಜುಲೈ 20) ಗುರುವಾರ 5.30ರ ಸಮಯಕ್ಕೆ ಪ್ರಸಾರವಾಗಲಿದ್ದು ಈ ಕಾರ್ಯಕ್ರಮದಲ್ಲಿ ಪಾವನ ನಿಟ್ಟೂರು ಭಾಗವಹಿಸಲಿದ್ದಾರೆ.
ಎಳೆಯ ವಯಸ್ಸಿನಲ್ಲಿಯೇ ತನ್ನ ಸಂಪೂರ್ಣ ದೃಷ್ಟಿಯನ್ನು ಕಳೆದುಕೊಂಡಿದ್ದರೂ ತನ್ನ ಸ್ವಂತ ಪರಿಶ್ರಮದಿಂದ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಪೂರೈಸಿ, ಸಾಧನೆಯ ಹಾದಿಯಲ್ಲಿ ಸಾಗುತ್ತಿರುವ ವಿರಳ ಚೇತನ ಪಾವನ ಪಿ.ಯು.ಸಿ ಕಲಾವಿಭಾಗದಲ್ಲಿ 93% ಅಂಕಗಳೊಂದಿಗೆ, ವಿಶೇಷವಾಗಿ ಸಮಾಜಶಾಸ್ತ್ರ ವಿಷಯದಲ್ಲಿ 98 ಅಂಕಗಳೊಂದಿಗೆ ಉಡುಪಿ ಸರಕಾರಿ ಪದವಿಪೂರ್ವ ಕಾಲೇಜಿನ (ಬೋರ್ಡ್ ಹೈಸ್ಕೂಲ್) ಕಲಾವಿಭಾಗದಲ್ಲಿ ಟಾಪರ್ ಅಗಿ ಗುರುತಿಸಿಕೊಂಡಿದ್ದು ಈ ಕಾರ್ಯಕ್ರಮವು ಜುಲೈ 21ರಂದು ಶುಕ್ರವಾರ ಮಧ್ಯಾಹ್ನ 1.30ಕ್ಕೆ ಮರು ಪ್ರಸಾರವಾಗಲಿದೆ ಎಂದು ರೇಡಿಯೊ ಮಣಿಪಾಲದ ಸಹಾಯಕ ಪ್ರಾಧ್ಯಾಪಕರು ಮತ್ತು ಸಂಯೋಜಕರಾಗಿರುವ ಡಾ.ರಶ್ಮಿ ಅಮ್ಮೆಂಬಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ