ಗೋಕರ್ಣ: ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀಸ್ವಾಮೀಜಿಯವರ ಚಾತುರ್ಮಾಸ್ಯಕ್ಕೆ ಪೂರ್ವಭಾವಿಯಾಗಿ ಅಶೋಕೆಯಲ್ಲಿರುವ ಶ್ರೀ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ಶನಿವಾರ ಧಾನ್ಯಲಕ್ಷ್ಮಿ ಪೂಜೆ ನಡೆಯಿತು.
ಜುಲೈ 3 ರಿಂದ ನಡೆಯುವ ಸಂಘಟನಾ ಚಾತುರ್ಮಾಸ್ಯಕ್ಕಾಗಿ ನಾಡಿನ ಮೂಲೆ ಮೂಲೆಗಳಿಂದ ಬಂದಿರುವ ಸುವಸ್ತುಗಳನ್ನು ವಿಶೇಷವಾಗಿ ಅಲಂಕೃತ ಮಂಟಪದಲ್ಲಿ ಪೂಜಿಸಲಾಯಿತು. ಪರಮೇಶ್ವರ ಮಾರ್ಕಂಡೆ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳು ನಡೆದವು. ಶ್ರೀಕ್ಷೇತ್ರ ದೇವರಗುಡ್ಡದ ಮುಖ್ಯ ಅರ್ಚಕ ವೇದಮೂರ್ತಿ ಸಂತೋಷ್ ಭಟ್ ಅತಿಥಿಗಳಾಗಿ ಆಗಮಿಸಿದ್ದರು. ಸುವಸ್ತು ವಿಭಾಗದ ರಾಜಾರಾಂ ಭಟ್ ದಂಪತಿಗಳು ಯಜಮಾನತ್ವ ವಹಿಸಿದ್ದರು.
ಶ್ರೀಮಠದ ಪ್ರಶಾಸನಾಧಿಕಾರಿ ಸಂತೋಷ್ ಹೆಗಡೆ, ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ, ಪ್ರಧಾನ ಕಾರ್ಯದರ್ಶಿ ನಾಗರಾಜ ಭಟ್ ಪಿದಮಲೆ, ಸಂಘಟನಾ ಕಾರ್ಯದರ್ಶಿ ಅರವಿಂದ ದರ್ಬೆ, ನಿಯೋಜಿತ ಪ್ರಧಾನ ಕಾರ್ಯದರ್ಶಿ ಉದಯಶಂಕರ ಭಟ್ ಮಿತ್ತೂರು, ಚಾತುರ್ಮಾಸ್ಯ ಸಮಿತಿಯ ಗೌರವಾಧ್ಯಕ್ಷ ಡಿ.ಡಿ. ಶರ್ಮಾ, ಪ್ರಧಾನ ಕಾರ್ಯದರ್ಶಿ ನೀಲಕಂಠ ಯಾಜಿ, ಕಾರ್ಯಾಧ್ಯಕ್ಷ ಮಂಜುನಾಥ್ ಸುವರ್ಣಗದ್ದೆ, ಕಾರ್ಯದರ್ಶಿ ಶ್ರೀಕಾಂತ ಪಂಡಿತ್ ಮತ್ತಿತರರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ