ದೇಶದಾದ್ಯಂತ ‘ವಕ್ಫ್ ಬೋರ್ಡ್ ಕಾಯ್ದೆ’ ರದ್ದುಗೊಳಿಸಲು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನದಲ್ಲಿ ಬೇಡಿಕೆ

Upayuktha
0

ಕರ್ನಾಟಕದಲ್ಲಿ ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ


ಬೆಂಗಳೂರು:
ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಬೆನ್ನಲ್ಲೇ ಹಿಂದೂ ಕಾರ್ಯಕರ್ತರ ಮೇಲೆ ವಿವಿಧ ರೀತಿಯ ಆಕ್ರಮಣಗಳು ಹೆಚ್ಚಾಗಿವೆ. ಹಿಂದೂ ಕಾರ್ಯಕರ್ತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಅವರಿಗೆ ಥಳಿಸುವುದು ಮತ್ತು ಭಯ ನಿರ್ಮಾಣ ಮಾಡುವ ಪ್ರಕ್ರಿಯೆ ನಡೆಯುತ್ತಿವೆ, ಜೈನ ಮುನಿ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ಮತ್ತು ಯುವ ಬ್ರಿಗೇಡ್ ನ  ವೇಣುಗೋಪಾಲ ಇವರ ಹತ್ಯೆ, ಸೇರಿದಂತೆ ಇನ್ನೂ ಹಲವಾರು ಘಟನೆಗಳು ಹಿಂದೂ ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿದೆ ಎಂದು ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ಆರೋಪಿಸಿದೆ.

ಅಷ್ಟೇ ಅಲ್ಲದೆ ಮೊನ್ನೆಯಷ್ಟೇ ಬೆಂಗಳೂರಿನಲ್ಲಿ ಪ್ರತಿ ರವಿವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ಮಾಡಿ, ಗೋವಿನ ಎಲಬುಗಳನ್ನು ದೇವಸ್ಥಾನ, ಹಿಂದೂ ಮನೆಗಳ ಎದುರು ಎಸೆದು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿದ್ದಾರೆ, ಹಾಗಾಗಿ ಹಿಂದೂ ಕಾರ್ಯಕರ್ತರಿಗೆ, ಹಿಂದೂ ಧರ್ಮಕ್ಕೆ ಹೋರಾಟ ಮಾಡುವವರಿಗೆ ರಕ್ಷಣೆ ನೀಡಬೇಕು, ಹಿಂದೂಗಳ ಮೇಲೆ ಆಕ್ರಮಣ ಮಾಡುವವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲು ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಬೇಕೆಂದು ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ ನಡೆಸಲಾಯಿತು.

ಈ ವೇಳೆ ರಾಷ್ಟ್ರ ರಕ್ಷಣಾ ಪಡೆಯ ಪುನೀತ್ ಕೆರೆಹಳ್ಳಿ, ರಾಷ್ಟ್ರೀಯ ಹಿಂದೂ ಪರಿಷತ್ ನ ವಿಕ್ರಮ್ ಶೆಟ್ಟಿ, ಶ್ರೀರಾಮ ಸೇನೆಯ ವಿಭಾಗೀಯ ಅಧ್ಯಕ್ಷ ಸುಂದರೇಶ್, ಹಿಂದವೀ ಜಟ್ಕಾ ಮೀಟ್ ನ ಮುನೇಗೌಡ, ಪ್ರಶಾಂತ್ ಸಂಬರಗಿ, ರೋಹಿತ್ ಚಕ್ರತೀರ್ಥ, ಪ್ರೊಫೆಸರ್ ಎಸ್. ಆರ್ ಲೀಲಾ, ಅಡ್ಡಂಡ ಕಾರ್ಯಪ್ಪನವರು, ಸುರೇಶ್ ಜೈನ್, ಸುರೇಶ್ ಗೌಡ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಮೋಹನ್ ಗೌಡ ಸೇರಿದಂತೆ 250ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರು ಉಪಸ್ಥಿತರಿದ್ದರು.


ವಕ್ಫ್ ಬೋರ್ಡ್ ವಶಪಡಿಸಿಕೊಂಡ ಭೂಮಿಯನ್ನು ಮೂಲ ಮಾಲೀಕರಿಗೆ ಹಿಂತಿರುಗಿಸಿ !

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಕ್ಫ್ ಬೋರ್ಡ್ ತನ್ನ ಕಾನೂನನ್ನು ದುರುಪಯೋಗ ಪಡಿಸಿಕೊಂಡು ಸರಕಾರಿ ಮತ್ತು ಖಾಸಗಿ ಜಮೀನುಗಳನ್ನು ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದೆ. ಆ ಮೂಲಕ ದೇಶದಲ್ಲಿ 8 ಲಕ್ಷ ಎಕರೆ ಜಮೀನನ್ನು ಕಬಳಿಸಿದೆ. ಇದೊಂದು ದೊಡ್ಡ 'ಲ್ಯಾಂಡ್ ಜಿಹಾದ್' ಆಗಿದೆ. ಹಾಗಾಗಿ ಈ ಕಾನೂನನ್ನು ರದ್ದುಗೊಳಿಸಿ ಜಮೀನಿನ ನಿಜವಾದ ಮಾಲೀಕರಿಗೆ ಅದರ ಅಧಿಕಾರವನ್ನು ನೀಡಬೇಕು. ದೇಶದಲ್ಲಿ ’ಸಮಾನ ನಾಗರಿಕ ಕಾನೂನು’ ಜಾರಿಗೆ ತರುವ ಮೂಲಕ ಅಲ್ಪಸಂಖ್ಯಾತರ ಹೆಸರಿನಲ್ಲಿ ಜಾರಿಯಲ್ಲಿರುವ ಎಲ್ಲಾ ವಿಶೇಷ ಸೌಲಭ್ಯಗಳು, ಕಾನೂನುಗಳು, ಆಯೋಗಗಳು, ಮಂಡಳಿಗಳು, ಸರಕಾರಿ ಇಲಾಖೆಗಳನ್ನು ರದ್ದುಪಡಿಸಬೇಕು ಮತ್ತು ಎಲ್ಲರಿಗೂ ಸಮಾನ ನಡವಳಿಕೆ ಸಿಗುವಂತಾಗಬೇಕು. ಈ ಬೇಡಿಕೆಗಳನ್ನು ಅಂಗೀಕರಿಸದಿದ್ದರೆ ‘ವಕ್ಫ್ ಕಾನೂನು’ ವಿರುದ್ಧ ಪ್ರಬಲ ಚಳವಳಿ ನಡೆಸಬೇಕಾಗುತ್ತದೆ ಎಂದು ಈ ಆಂದೋಲನದ ಮೂಲಕ ಎಚ್ಚರಿಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top