ಉಜಿರೆ: ಗುರು ಪೂರ್ಣಿಮಾ ಕಾರ್ಯಕ್ರಮ

Upayuktha
0

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು. 


ಗುರುವಿನ ಮಹತ್ವದ ಬಗ್ಗೆ ಸಿಂಚನಾ ಕೆ, ವೇದವ್ಯಾಸರ ಜೀವನ ಹಾಗೂ ಕೊಡುಗೆಗಳ ಬಗ್ಗೆ ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ರಮೇಶ್ ಹೆಗಡೆ ಮಾತನಾಡಿದರು. ರಾ. ಸೇ. ಯೋಜನೆಯ ನಾಯಕಿ ದಕ್ಷಾ, ವಂದಿತಾ. ಎಸ್. ರಾವ್ ಹಾಗೂ ಸೃಷ್ಠಿ ಎಸ್.ಎಲ್ ಗುರುಗಳ ಮಹತ್ವ ಸಾರುವ ಗೀತೆಯನ್ನು ಪ್ರಸ್ತುತಪಡಿಸಿದರು. 

ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ರಾ.ಸೇ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು. ರಾ.ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ನಿರೂಪಿಸಿ ವಂದಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Advt Slider:
To Top