ಪಾಲಕರು ಮಕ್ಕಳಿಗೆ ಮಾದರಿಯಾಗಬೇಕು: ಗಣರಾಜ ಕುಂಬ್ಳೆ

Upayuktha
0

  ಫಿಲೋಮಿನಾ ಪದವಿ ಪೂರ್ವಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ಉದ್ಘಾಟನೆ

ಪುತ್ತೂರು: ಇಂದಿನ ಕಾಲಘಟ್ಟದಲ್ಲಿ ಮನುಷ್ಯನ ಜೀವನ ಶೈಲಿಯು ಬದಲಾವಣೆಯಾಗುತ್ತಿದ್ದು, ಸಾಮಾಜಿಕ ಜಾಲತಾಣಗಳು ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ. ಮಕ್ಕಳು ಮನೆಯವರೊಂದಿಗೆ ಬೆರೆತಾಗ ಮಕ್ಕಳ ಬದುಕು ಉಜ್ಜಲವಾಗುತ್ತದೆ ಎಂದು ರಾಮಕುಂಜೇಶ್ವರ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಗಣರಾಜ ಕುಂಬ್ಳೆ ಹೇಳಿದರು.

ಜುಲೈ 15ರಂದು ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಮಹಾಸಭೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಬಳಿಕ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪ್ರಾತ್ರಗಳ ಕುರಿತು ಚಿಂತನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳಿಗಾಗಿ ಹೆತ್ತವರು ಸಮಯವನ್ನು ನೀಡಬೇಕು. ಆಗ ಮಕ್ಕಳಲ್ಲಿ ಆಪ್ತತೆ ಮೂಡಲು ಸಾಧ್ಯವಾಗುತ್ತದೆ. ಮಕ್ಕಳ ಚಾರಿತ್ರ್ಯ ನಿರ್ಮಾಣದಲ್ಲಿ ಹೆತ್ತವರ ಪಾತ್ರ ಬಹಳ ಮುಖ್ಯವಾಗಿರುತ್ತದೆ. ಮಕ್ಕಳಲ್ಲಿ ಒಳ್ಳೆಯ ಆತ್ಮವಿಶ್ವಾಸ ಮತ್ತು ಕೌಶಲ್ಯವನ್ನು ಮೂಡಿಸಬೇಕು. ಸಮಾಜಕ್ಕಾಗಿ ಚಿಂತನೆ ಮಾಡುವಂತೆ ಮಕ್ಕಳಿಗೆ ಪ್ರೋತ್ಸಾಹವನ್ನು ನೀಡಬೇಕು ಎಂದು ಹೇಳಿದರು.


ಅಧ್ಯಕ್ಷತೆ ವಹಿಸಿದ ಮಾಯಿದೆ ದೇವುಸ್ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕರಾದ ರೆ. ಫಾಲಾರೆನ್ಸ್ ಮಸ್ಕರೇನಸ್‍ರವರು ಮಾತನಾಡಿ, ಮಕ್ಕಳು ನಮ್ಮ ದೇಶದ ಸಂಪತ್ತು, ಸಮಾಜದ ಸಂಪತ್ತು ಆಗಬೇಕೆಂದರೆ ಮಕ್ಕಳಿಗೆ ಮನೆ ಮತ್ತು ಶಾಲೆಯು ಒಳ್ಳೆಯ ಅಡಿಪಾಯವಾಗಿದೆ. ಹೆತ್ತವರು ಮಕ್ಕಳಲ್ಲಿ ದೇವರು ಮತ್ತು ಗುರು ಹಿರಿಯರಲ್ಲಿ ಭಯ ಮತ್ತು ಭಕ್ತಿಯನ್ನು ಉಂಟುಮಾಡಬೇಕು. ಜೀವನಕ್ಕೆ ಬೇಕಾದ ಜೀವನ ಪಾಠ ಮತ್ತು ಆತ್ಮಸ್ಥ್ಯೆರ್ಯವನ್ನು ಮಕ್ಕಳಲ್ಲಿ ಬೆಳೆಸಿದರೆ ಖಂಡಿತವಾಗಿಯೂ ತಮ್ಮ ಜೀವನದಲ್ಲಿ ಗೆಲ್ಲಲು ಸಾಧ್ಯ ಎಂದು ಹೆತ್ತವರಿಗೆ ಕಿವಿ ಮಾತು ಹೇಳಿದರು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಮಾಯಿದೆ ದೇವುಸ್‍ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಜೆರಾಲ್ಡ್ ಡಿ ಕೋಸ್ಟಾ ಮಾತನಾಡಿ ಹೆತ್ತವರು ಮಕ್ಕಳ ಜೊತೆ ಉತ್ತಮ ಬಾಂಧವ್ಯ ಹೊಂದಿರಬೇಕು. ಮಕ್ಕಳು ಒಳ್ಳೆಯ ಧ್ಯೇಯ, ಶ್ರದ್ಧೆ, ಶ್ರಮ ಮತ್ತು ಶಿಸ್ತನ್ನು ಆಳವಡಿಸಿಕೊಂಡರೆ ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಹೇಳಿದರು.


2022-23ನೇ ಸಾಲಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮಾಮಚ್ಚನ್ ಎಂ ಇವರನ್ನು ಈ ಸಂದರ್ಭದಲ್ಲಿ ಸಮ್ಮಾನಿಸಲಾಯಿತು. 2023-24ನೇ ಸಾಲಿನ ನೂತನ ಅಧ್ಯಕ್ಷರಾಗಿ ಪುತ್ತೂರು ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ ನಡುಬೈಲು ಇವರನ್ನುಆಯ್ಕೆ ಮಾಡಲಾಯಿತು.


ಕಾಲೇಜಿನ ಪ್ರಾಂಶುಪಾಲರಾದರೆ .ಫಾ. ಅಶೋಕ್‍ ರಾಯನ್‍ ಕ್ರಾಸ್ತಾ ಪ್ರಾಸ್ತಾವಿಕ ಮಾತುಗಳನ್ನು ಹೇಳಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಮಾಮಾಚ್ಚನ್‍ಯಂ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ವಿದ್ಯಾರ್ಥಿಗಳ ಹೆತ್ತವರು, ಪೋಷಕರು, ಕಾಲೇಜಿನ ಬೋಧಕ ಮತ್ತು ಬೋಧಕೇತರ ವೃಂದಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ರಕ್ಷಕ ಶಿಕ್ಷಕ ಸಂಘದ ಕಾರ್ಯದರ್ಶಿ ಯಶವಂತ ಎಂ ಡಿ ಸ್ವಾಗತಿಸಿ, ಕೋಶಾಧಿಕಾರಿ ಸಂಜಯ್‍ಎಸ್ 2022-23ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು.

ಉಪನ್ಯಾಸಕಿಯರಾದ ಯಶಸ್ವಿನಿ ವಂದಿಸಿ, ಉಷಾ ಯಶ್ವಂತ್‍ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top