ಸಂಪರ್ಕ್‌ ಸೇ ಸಮರ್ಥನ್: ಪ್ರಧಾನಿ ಮೋದಿ ಸರಕಾರದ ಸಾಧನೆಗಳ ಕಿರುಹೊತ್ತಿಗೆ- ಶಾಸಕ ಕಾಮತ್ ವಿತರಣೆ

Chandrashekhara Kulamarva
0

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ಯಶಸ್ವಿಯಾಗಿ 9 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಸಂಪರ್ಕ್ ಸೇ ಸಮರ್ಥನ್ ಅಭಿಯಾನದ ಅಂಗವಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮಂಡಲ ಅಧ್ಯಕ್ಷರಾದ ವಿಜಯ್ ಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಪ್ರಮುಖರು ಚಾರ್ಟರ್ಡ್ ಅಕೌಂಟೆಂಟ್ ಅಸೋಸಿಯೇಷನ್ ಅಧ್ಯಕ್ಷರಾದ ಗೌತಮ್ ನಾಯಕ್ ಅವರ ಮನೆಗೆ ಭೇಟಿ ನೀಡಿ ಕೇಂದ್ರ ಸರಕಾರದ ಸಾಧನೆಗಳ ಕಿರು ಹೊತ್ತಿಗೆಯನ್ನು ನೀಡಿದರು‌. 


ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕಾಮತ್, ಕಳೆದ 9 ವರ್ಷಗಳಲ್ಲಿ ದೇಶದ ಸಾಕಷ್ಟು ಬದಲಾವಣೆಗಳಾಗಿವೆ. ಪ್ರಬಲ‌ ನಾಯಕತ್ವದ ಮೂಲಕ ಭಾರತ ಇಂದು ವಿಶ್ವದ ಪ್ರಭಾವಿ ದೇಶವಾಗಿ ಗುರುತಿಸಿಕೊಳ್ಳುತ್ತಿದೆ. ದೂರದರ್ಶಿ ನಾಯಕರಾಗಿರುವ ನರೇಂದ್ರ ಮೋದಿ ಅವರಿಂದ ಸಾಕಷ್ಟು ಸುಧಾರಣೆಗಳಾಗಿದ್ದು ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಗೆಲ್ಲಿಸಲು ಕೈಜೋಡಿಸಬೇಕು ಎಂದು ಮನವಿ ಮಾಡಿದರು. 


ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್ ಸಂಧ್ಯಾ ಮೋಹನ್ ಆಚಾರ್ಯ, ಬಿಜೆಪಿ ಮುಖಂಡರಾದ ನಿತಿನ್ ಕುಮಾರ್, ರೂಪಾ ಡಿ ಬಂಗೇರ, ರಮೇಶ್ ಹೆಗ್ಡೆ,  ಗುರುಚರಣ್, ಗೋಕುಲ್ ದಾಸ್ ಭಟ್, ಮೋಹನ್ ಆಚಾರ್ಯ, ರಾಮ್ ಪೈ, ನಿಲೇಶ್ ಕಾಮತ್, ಪವನ್ ಶೆಣೈ, ಪೃಥ್ವಿರಾಜ್ ಮುಂತಾದವರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top