ವಿಶ್ವ ಜಾಂಬೂರಿ 2023: ವಿವೇಕಾನಂದ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಆಯ್ಕೆ

Chandrashekhara Kulamarva
0


 

ಪುತ್ತೂರು: ದೇಶಗಳ ಸಂಸ್ಕೃತಿಯನ್ನು ಬಿಂಬಿಸುವ ಹಾಗೂ ಇತರರೊಡನೆ ಕ್ರಿಯಾಶೀಲವಾಗಿ ಪಾಲ್ಗೊಳ್ಳುವ, ನಾಯಕತ್ವ, ಕುಶಲತೆ ಮತ್ತು ವೈಯಕ್ತಿಕ ಹೊಣೆಗಾರಿಕೆಯ ನಿಟ್ಟಿನಲ್ಲಿ ನಿಮ್ಮ ಕನಸುಗಳನ್ನು ಚಿತ್ರಿಸಿಕೊಳ್ಳಿ ಎಂಬ ಧ್ಯೇಯದೊಂದಿಗೆ ದಕ್ಷಿಣ ಕೊರಿಯಾದಲ್ಲಿ ದಿನಾಂಕ ಆ.1ರಿಂದ ಆ.12ರವರೆಗೆ ನಡೆಯುವ ಸ್ಕೌಟ್ಸ್ ಮತ್ತು ಗೈಡ್ಸ್ ನ 25ನೇ ವಿಶ್ವ ಜಾಂಬೂರಿಯಲ್ಲಿ 2023ರಲ್ಲಿ ಭಾರತ  ದೇಶದ ಪ್ರತಿನಿಧಿಗಳಾಗಿ ಭಾಗವಹಿಸಲು ಕರ್ನಾಟಕ ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ  ಇಬ್ಬರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.


ವಿದ್ಯಾರ್ಥಿಗಳಾದ ಧನುಷ್‌ರಾಮ್ ಎಂ (ಕಿಯೋನಿಕ್ಸ್‌ನ  ದಿನೇಶ್ ಪ್ರಸನ್ನ ಮತ್ತು ಉಮಾ  ಪ್ರಸನ್ನರವರ ಪುತ್ರ) ಹಾಗೂ ವೈಷ್ಣವಿ (ಮುಕ್ರುಂಪಾಡಿಯ ಹರ್ಷ ಡಿ ಎಸ್ ಮತ್ತು ಕವಿತಾ ಕೆ ರವರ ಪುತ್ರಿ) ಭಾಗವಹಿಸಲಿದ್ದಾರೆ.


ಜುಲೈ 31ಕ್ಕೆ ಮಂಗಳೂರಿನಿಂದ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸುವ 48 ವಿದ್ಯಾರ್ಥಿಗಳ ತಂಡದೊಂದಿಗೆ  ಈ ವಿದ್ಯಾರ್ಥಿಗಳು ಬೆಂಗಳೂರು ಮತ್ತು ಹಾಂಕಾಂಗ್ ಮೂಲಕ ಸೌತ್ ಕೊರಿಯಾಕ್ಕೆ ತೆರಳಿ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
To Top