ಬೆಂಗಳೂರು: ವರ್ತೂರು ಮುಖ್ಯ ರಸ್ತೆಯ ವೈಟ್ ಫೀಲ್ಡ್ ನಲ್ಲಿ ಪೇಜಾವರ ಮಠದ ವತಿಯಿಂದ ನಿರ್ಮಿಸಲಾಗಿರುವ ಶ್ರೀ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆಯನ್ನು ಶನಿವಾರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಉದ್ಘಾಟಿಸಿದರು. ಆಸ್ಪತ್ರೆ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಕೆ ಜೈರಾಜ್, ಗೌರವ ಕಾರ್ಯದರ್ಶಿ ವಿಕೆ ಹರಿದಾಸ್ ಮೊದಲಾದವರು ಉಪಸ್ಥಿತರಿದ್ದರು. ಪ್ರಸ್ತುತ ಈ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗವನ್ನು ಆರಂಭಿಸಲಾಗಿದ್ದು ಉಳಿದ ಕಟ್ಟಡ ಕಾಮಗಾರಿ ಪೂರ್ಣಗೊಂಡ ಬಳಿಕ ಒಳರೋಗಿ ವಿಭಾಗ ಆರಂಭಿಸಲಾಗುವುದು ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ