(ಪ್ರಾತಿನಿಧಿಕ, ಫೈಲ್ ಚಿತ್ರ)
ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜು.9 ರಂದು ಭಾನುವಾರ ಪೂರ್ವಾಹ್ನ 10 ಗಂಟೆಗೆ ಬೆಳ್ತಂಗಡಿ ತಾಲ್ಲೂಕಿನ ಪುರುಷರ ಮಜಲು ಪರಿಸರದಲ್ಲಿ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ತಿಳಿಸಿದ್ದಾರೆ.
ಶಾಸಕ ಹರೀಶ್ ಪೂಂಜ ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕರಿಕಾಲನ್ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್ ಕುಮಾರ್, ವೈ.ಕೆ. ಸಸಿಗಳನ್ನು ವಿತರಿಸುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಈ ವರ್ಷ ಹತ್ತು ಲಕ್ಷಕ್ಕೂ ಮಿಕ್ಕಿ ಸಸಿಗಳನ್ನು ನಾಟಿ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜು.9 ರಂದು ಭಾನುವಾರ ತಣ್ಣೀರುಪಂಥ ಮೀಸಲು ಅರಣ್ಯ ಪ್ರದೇಶದಲ್ಲಿ 4,500 ಗಿಡಗಳನ್ನು ನಾಟಿ ಮಾಡಲಾಗುವುದು.
ರಾಜ್ಯದೆಲ್ಲೆಡೆ ಈಗಾಗಲೆ 4,332 ಕಾರ್ಯಕ್ರಮಗಳ ಮೂಲಕ 2,40,399 ಹಣ್ಣುಹಂಪಲಿನ ಗಿಡಗಳನ್ನು ಹಾಗೂ 5,27,898 ಇತರ ಗಿಡಗಳನ್ನು 4,300 ಎಕ್ರೆ ಪ್ರದೇಶದಲ್ಲಿ ನಾಟಿ ಮಾಡಲಾಗಿದೆ. ಇದಕ್ಕಾಗಿ 36 ಲಕ್ಷ ರೂ. ಅನುದಾನ ವಿನಿಯೋಗಿಸಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ