ಶ್ರೀನಿವಾಸ ವಿಶ್ವವಿದ್ಯಾಲಯದ ಪ್ರವೇಶ ಮಾಹಿತಿ ಕಾರ್ಯಕ್ರಮ

Upayuktha
0

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂನ 2023-24 ಬ್ಯಾಚ್ ವಿದ್ಯಾರ್ಥಿಗಳ ಓರಿಯಂಟೇಶನ್ ಕಾರ್ಯಕ್ರಮವು ಶ್ರೀನಿವಾಸ ಯೂನಿವರ್ಸಿಟಿಯ ಸಿಟಿ ಕ್ಯಾಂಪಸ್‌ನಲ್ಲಿ 10 ಜುಲೈ 2023 ರಂದು ನಡೆಯಿತು.


ಕಾರ್ಯಕ್ರಮವನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಡಾ.ಸಿಎ. ಎ. ರಾಘವೇಂದ್ರ ರಾವ್ ಉದ್ಘಾಟಿಸಿದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ, ಹೋಟೆಲ್ ಮ್ಯಾನೇಜ್‌ಮೆಂಟ್ ನೀವು ಗಳಿಸುವ ಜೊತೆಗೆ ಇತರರ ಹೊಟ್ಟೆಯನ್ನು ತುಂಬುವ ಮತ್ತು ಅವರ ಮುಖದಲ್ಲಿ ನಗು ತರುವಂತಹ ಕೋರ್ಸ್ ಆಗಿದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನ ನಮ್ಮ ಸಂಸ್ಥೆಯಲ್ಲಿ ಸುಖಕರ ವಾಗಿರಲಿ ಎಂದು ಹಾರೈಸಿದರು.


ಶ್ರೀನಿವಾಸ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಪಿ.ಎಸ್.ಐತಾಳ್ ಅವರು ವಿದ್ಯಾರ್ಥಿಗಳ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ವಿವರಿಸಿದರು. ಶ್ರೀನಿವಾಸ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಟ್ರಸ್ಟಿ ಸದಸ್ಯೆ ಶ್ರೀಮತಿ. ಎ.ವಿಜಯಲಕ್ಷ್ಮಿ ಆರ್.ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ ಅಂಡ್ ಟೂರಿಸಂ ಡೀನ್ ಪ್ರೊ. ಸ್ವಾಮಿನಾಥನ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕ ಪ್ರೊ.ಪ್ರಶಾಂತ್ ಪ್ರಭು ವಂದಿಸಿದರು. ವಿದ್ಯಾರ್ಥಿನಿ ಮಂಜುಶ್ರೀ ಕಾರ್ಯಕ್ರಮ ನಿರೂಪಿಸಿದರು.


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
To Top