ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ರೋಟರಿಕ್ಲಬ್ ಪುತ್ತೂರು ಸಿಟಿ ಪ್ರಾಯೋಜಕತ್ವದ ಇಂಟರ್‍ಯಾಕ್ಟ್ ಕ್ಲಬ್‌ನ ಪದಗ್ರಹಣ ಕಾರ್ಯಕ್ರಮವು ಜುಲೈ 21ರಂದು ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಜಿಲ್ಲಾಇಂಟರ್‍ಯಾಕ್ಟ್ ಕ್ಲಬ್‌ನ ಅಧ್ಯಕ್ಷರಾದ ಮಂಜುನಾಥ ಆಚಾರ್ಯ ಮಾತಾನಾಡಿ ವಿದ್ಯಾರ್ಥಿಗಳು ಸಮಾಜದಲ್ಲಿನ ಅಗತ್ಯತೆಯನ್ನು ಅರಿತುಕೊಂಡು ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು. ರೋಟರಿಕ್ಲಬ್ ಸಮಾಜದ ಸೇವೆಗೆ ಮಾದರಿಯಾಗಿದೆ ಎಂದು ರೋಟರಿ ಸಂಸ್ಥೆಯ ಕಾರ್ಯವ್ಯಾಪಿ, ಉದ್ದೇಶದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ಇನ್ನೋರ್ವ ಮುಖ್ಯ ಅತಿಥಿಗಳಾದ ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ ಅಶೋಕ್ರಾಯನ್ ಕ್ರಾಸ್ತಾ ಮಾತಾನಾಡಿ, ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಲು ರೋಟರಿಕ್ಲಬ್ನಂತಹ ಸಂಸ್ಥೆಗಳು ಸಹಕಾರಿಯಾಗಿದೆ. ಕಲಿಕೆಯ ಜೊತೆಗೆ ಸಮಾಜ ಸೇವೆಯಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳಬೇಕು. ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಇದು ಸಹಕಾರಿಯಾಗಿದೆ ಎಂದರು.
ಜೋನ್ 4ರ ಅಸಿಸ್ಟೆಂಟ್ ಗರ್ವನರ್ ಲಾರೆನ್ಸ್ ಗೊನ್ಸಾಲ್ವಿಸ್ ಮಾತಾನಾಡಿ ವಿದ್ಯಾರ್ಥಿಗಳು ಉತ್ತಮ ಭಾಂದವ್ಯವನ್ನು ಬೆಳೆಸಲು ಈ ಸಂಸ್ಥೆಗಳು ಉತ್ತಮ ತಳಹದಿಯಾಗಿದೆ ಎಂದು ನೂತನ ಪದಾಧಿಕಾರಿಗಳಿಗೆ ಶುಭಹಾರೈಸಿದರು.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಆಂಚಿತ್ ಮಾತಾನಾಡಿ ರೋಟರಿಕ್ಲಬ್ನ ಉದ್ದೇಶವು ತನ್ನನ್ನು ಸಮಾಜಸೇವೆಯಲ್ಲಿ ತೊಡಗಸಿಕೊಳ್ಳುವಂತೆ ಮಾಡಿದೆ ಎಂದು ರೋಟರಿ ಕ್ಲಬ್ನ ತನ್ನ ಅನುಭವಗಳನ್ನು ಹಂಚಿಕೊಂಡರು. ವೇದಿಕೆಯಲ್ಲಿ ರೋಟರಿಕ್ಲಬ್ ಪುತ್ತೂರು ಸಿಟಿಯ ಜೊತೆ ಕಾರ್ಯದರ್ಶಿಯಾದ ದಯಾನಂದ ಕೆ.ಎಸ್ ಮತ್ತು ರೋಟರಿಕ್ಲಬ್ ಪುತ್ತೂರು ಸಿಟಿಯ ಇಂಟರ್‍ಯಾಕ್ಟ್ ಕ್ಲಬ್‌ನ ಅಧ್ಯಕ್ಷರಾದ ಜೆರೋಮಿಸ್ ಪಾಯಸ್ ಉಪಸ್ಥಿತರಿದ್ದರು. ರೋಟರಿಕ್ಲಬ್ ಪುತ್ತೂರು ಸಿಟಿಯ ಪದಾಧಿಕಾರಿಗಳು, ಸರ್ವ ಸದಸ್ಯರು, ಕಾಲೇಜಿನ ಬೋಧಕ, ಬೋಧಕೇತರ ವರ್ಗ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪ್ರದರ್ಶನ ಕಲಾ ವಿಭಾಗದ ವಿದ್ಯಾರ್ಥಿಗಳು ಪ್ರಾರ್ಥಿಸಿ,ರೋಟರಿಕ್ಲಬ್ ಪುತ್ತೂರು ಸಿಟಯ ಅಧ್ಯಕ್ಷರಾದ ಗ್ರೇಸಿ ಗೊನ್ಸಾಲ್ವಿಸ್ ಸ್ವಾಗತಿಸಿ ನೂತನಇಂಟರ್‍ಯಾಕ್ಟ್ ಕ್ಲಬ್‌ನ ಪದಾಧಿಕಾರಿಗಳಿಗೆ ಪ್ರಮಾಣವಚನವನ್ನು ಬೋಧಿಸಿದರು. ನೂತನ ಇಂಟರ್‍ಯಾಕ್ಟ್ ಕ್ಲಬ್‌ನ ಕಾರ್ಯದರ್ಶಿ ತನುಶ್ರೀ ವಂದಿಸಿ ಇನ್ಸ್ಟಿಟ್ಯೂಷನಲ್ ಸರ್ವಿಸ್ ನಿರ್ದೇಶಕರಾದ ಪ್ರತೀಕ್ಷಕಾರ್ಯಕ್ರಮ ನಿರೂಪಿಸಿದರು.
ಇಂಟರ್‍ಯಾಕ್ಟ್ ಕ್ಲಬ್‌ನ ನೂತನ ಅಧ್ಯಕ್ಷರಾಗಿ ವಿದ್ಯಾರ್ಥಿಗಳಾದ ಅಂಚಿತ್, ಉಪಾಧ್ಯಕ್ಷರಾಗಿ ಭವತ್, ಕಾರ್ಯದರ್ಶಿಯಾಗಿ ತನುಶ್ರೀ, ಜತೆ ಕಾರ್ಯದರ್ಶಿಯಾಗಿ ರಿತೇಶ್, ಕೋಶಾಧಿಕಾರಿಯಾಗಿ ತೇಜಸ್ವಿ, ಸಾರ್ಜಂಟ್ಎಟ್ಆಮ್ಸ್ ಆಗಿ ಎಂ ಆತ್ಮಿ,ಕ್ಲಬ್ ಸರ್ವೀಸ್ ನಿರ್ದೇಶಕರಾಗಿ ಆಕಾಶ್ ಸಾಲ್ಯಾನ್, ಇನ್ಸ್ಟಿಟ್ಯೂಷನಲ್ ಸರ್ವೀಸ್ ನಿರ್ದೇಶಕರಾಗಿ ಪ್ರತೀಕ್ಷ, ಕಮ್ಯೂನಿಟಿ ಸರ್ವೀಸ್ ನಿರ್ದೇಶಕರಾಗಿ ವರುಣ್, ಇಂಟರ್‍ನ್ಯಾಷನಲ್ ಸರ್ವೀಸ್ ನಿರ್ದೇಶಕರಾಗಿಗ್ಯಾನ್, ಇಂಟರ್‍ಯಾಕ್ಟ್ ಕ್ಲಬ್‌ನ ಸಂಯೋಜಕರಾಗಿ ಉಪನ್ಯಾಸಕರಾದ ಸತ್ಯಲತಾ ರೈ ಎಂ ಮತ್ತು ಸುಮಾ ಡಿ ಆಯ್ಕೆಯಾದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ