ಮಂಗಳೂರು: ಸುಭಾಷ್ ಯುವಕ ಮಂಡಲ ರಿ. ಮತ್ತು ಬಂಟ್ವಾಳ ವಲಯ ಅರಣ್ಯಾಧಿಕಾರಿಗಳ ಸಹಯೋಗದಲ್ಲಿ ಸಜೀಪಮೂಡ ಗ್ರಾಮದಲ್ಲಿ ಇಂದು ನೂರು ಗಿಡಗಳನ್ನು ನೆಟ್ಟು ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯ ಅತಿಥಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸಜೀಪ ಮಾಗಣೆ ತಂತ್ರಿಗಳಾದ ಎಂ. ಸುಬ್ರಹ್ಮಣ್ಯ ಭಟ್, ಸುಭಾಶ್ ಯುವಕ ಮಂಡಲದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಪ್ರವೀಣ್ ಆಳ್ವಾ, ನಾರಾಯಣ ಗುರು ಮಂದಿರದ ಅಧ್ಯಕ್ಷ ಗಿರೀಶ್ ಪೆರ್ವ, ಪಂಚಾಯತ್ ಸದಸ್ಯ ಯೋಗಿಶ್ ಬೆಳ್ಚಾಡ, ಶಾರದಾ ಪೂಜಾ ಸಮಿತಿಯ ಅಧ್ಯಕ್ಷ ವಸಂತ್ ಬರ್ಕೆ, ಶಾರದಾ ಪೂಜಾ ಸಮಿತಿ ಮಾಜಿ ಅಧ್ಯಕ್ಷ ಪ್ರಹ್ಲಾದ್ ಬೇಂಕ್ಯ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ದೇವಿ ಪ್ರಸಾದ್ ಪೂಂಜ, ಬಂಟ್ವಾಳ ವಲಯ ಅರಣ್ಯಾಧಿಕಾರಿ ರಾಜೇಶ್ ಬಾಳಿಗಾರ್, ಉಪ ವಲಯ ಅರಣ್ಯಾಧಿಕಾರಿ ಯಶೋಧರ ಹಾಗೂ ರೇಖಾ ವನಪಾಲಕರು ಮೆಲ್ಕಾರ್ ಗಸ್ತು ಹಾಗೂ ಯುವಕ ಮಂಡಲದ ಸರ್ವ ಸದಸ್ಯರೂ ಉಪಸ್ಥಿತರಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ