ಜನರ ಜೀವನ ಸುಧಾರಣೆ, ಉತ್ತಮ ಭವಿಷ್ಯಕ್ಕೆ ಮಾನವ ಸಂಪನ್ಮೂಲ ನಿರ್ವಹಣೆ ಅಗತ್ಯ: ಪ್ರಜ್ಞಾ ಎಸ್. ಶೆಟ್ಟಿ

Upayuktha
0


ಸುರತ್ಕಲ್‌:
ಜನರ ಜೀವನ ಸುಧಾರಣೆ ಮತ್ತು ಉತ್ತಮ ಭವಿಷ್ಯದ ನಿರ್ಮಾಣದಲ್ಲಿ ಮಾನವ ಸಂಪನ್ಮೂಲದ ಸಮರ್ಪಕ ನಿರ್ವಹಣೆ ಅಗತ್ಯ ಎಂದು ಮಂಗಳೂರಿನ ಬೆಸೆಂಟ್ ಸಂಧ್ಯಾಕಾಲೇಜಿನ ಪ್ರಾಧ್ಯಾಪಕಿ ಪ್ರಜ್ಞಾ ಎಸ್. ಶೆಟ್ಟಿ ಅಭಿಪ್ರಾಯಪಟ್ಟರು.

ಅವರು ಗೋವಿಂದದಾಸ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ,  ಮಾನವಿಕ ಸಂಘ ಹಾಗೂ ಅರ್ಥಶಾಸ್ತ್ರ ವಿಭಾಗದ ಆಶ್ರಯದಲ್ಲಿ ವಿಶ್ವಜನಸಂಖ್ಯಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲ್ಲಿಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. 


ಗೋವಿಂದದಾಸ ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ.ರಮೇಶ್ ಕುಳಾಯಿ ಮಾತನಾಡಿ, ನಮ್ಮ ದೇಶದಲ್ಲಿ 68 ಶೇಕಡದಷ್ಟು ಯುವ ಸಮುದಾಯವಿದ್ದು, ಇವರಲ್ಲಿನ ಕೌಶಲ್ಯವೃದ್ಧಿಯ ಮೂಲಕ ದೇಶವು ಅಭಿವೃದ್ಧಿಯಲ್ಲಿ ಜಾಗತಿಕವಾಗಿ ಪ್ರಥಮ ಸ್ಥಾನ ಪಡೆಯಲು ಸಾಧ್ಯವಿದೆ ಎಂದು ನುಡಿದರು.


ಕಾಲೇಜಿನ ಪ್ರಾಂಶುಪಾಲ ಪ್ರೊ.ಕೃಷ್ಣಮೂರ್ತಿ ಪಿ. ಅಧ್ಯಕ್ಷತೆ ವಹಿಸಿ ಮಾತನಾಡಿ, ಲಿಂಗ ಸಮಾನತೆಯ ಶಕ್ತಿಯ ತೆರೆದಿಡುವಿಕೆಯ ಮೂಲಕ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಹರೀಶ್‍ ಆಚಾರ್ಯ ಸ್ವಾಗತಿಸಿದರು, ಶಮಾ ಫರ್ಹಾನ ವಂದಿಸಿದರು, ಸೌಪರ್ಣಿಕ ಕಾರ್ಯಕ್ರಮ ನಿರೂಪಿಸಿದರು.


ಕಾಲೇಜಿನ ಉಪಪ್ರಾಂಶುಪಾಲ ಪ್ರೊ.ರಮೇಶ್ ಭಟ್‍ ಎಸ್.ಜಿ., ದೈಹಿಕ ಶಿಕ್ಷಣ ನಿರ್ದೇಶಕ ಡಾ.ಪ್ರಶಾಂತ್, ಕ್ಯಾಪ್ಟನ್ ಸುಧಾ ಯು., ಡಾ. ವಿಜಯಲಕ್ಷ್ಮೀ, ದಯಾ ಸುವರ್ಣ, ರಶ್ಮಿ ಕಾಯರ್‍ಮಾರ್, ಡಾ. ಸುಜಾತ ಉಪಸ್ಥಿತರಿದ್ದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top