ನಿರಂತರ ಶ್ರಮ, ತಾಳ್ಮೆ ಇದ್ದಲ್ಲಿ ಯಶಸ್ಸು ಖಚಿತ: ಬಿ.ಕೆ. ಧನಂಜಯ

Upayuktha
0

ಉಜಿರೆ: ಯಾವುದೇ ವೃತ್ತಿಯನ್ನು ಆಯ್ದುಕೊಂಡರೂ ಕೂಡ ನಿರಂತರ ಶ್ರಮ ಹಾಗೂ ತಾಳ್ಮೆ ಇದ್ದಲ್ಲಿ ಯಶಸ್ಸು ಖಚಿತ ಎಂದು ವಕೀಲ ಬಿ.ಕೆ. ಧನಂಜಯ ರಾವ್ ಹೇಳಿದರು.  


ಇಲ್ಲಿನ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಸಭಾಂಗಣದಲ್ಲಿ ಇಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ವಾಣಿಜ್ಯ ವಿಭಾಗದ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ‘ಕೆರಿಯರ್ ಒರಿಯೆಂಟೇಶನ್’ ಕಾರ್ಯಕ್ರಮದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.


ವೃತ್ತಿಯ ಆರಂಭದಲ್ಲಿ ಇದ್ದ ತಾಳ್ಮೆಯನ್ನು ಕಳೆದುಕೊಳ್ಳದೆ, ನಿರಂತರ ಶ್ರಮ ಹಾಕಿ ಕಾರ್ಯ ನಿರ್ವಹಿಸಿದಾಗ ಯಾವುದೇ ವೃತ್ತಿಯೂ ಕೈ ಹಿಡಿಯುತ್ತದೆ ಎಂದು ಅವರು ತಿಳಿಸಿದರು. ಬಿ.ಕಾಂ. ವಿದ್ಯಾರ್ಥಿಗಳಿಗೆ ಇರುವ ವಿವಿಧ ಅವಕಾಶಗಳ ಬಗ್ಗೆ ತಿಳಿಸಿದ ಅವರು ವಕೀಲ ವೃತ್ತಿಯ ಸಾಧ್ಯತೆ ಹಾಗೂ ಸವಾಲುಗಳ ಬಗ್ಗೆಯೂ ಬೆಳಕು ಚೆಲ್ಲಿದರು.


ಕಾರ್ಯಕ್ರಮದ ಮುಖ್ಯ ಅತಿಥಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಪಿ.ಎನ್. ಉದಯಚಂದ್ರ ಮಾತನಾಡಿ, “ಕೌಶಲಗಳನ್ನು ಅಳವಡಿಸಿಕೊಂಡು, ಸೂಕ್ತ ಸಿದ್ಧತೆಯೊಂದಿಗೆ ಭವಿಷ್ಯ ರೂಪಿಸಿಕೊಳ್ಳಿ” ಎಂದು ಶುಭ ಹಾರೈಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ, “ಧೈರ್ಯ, ಸಂವಹನ, ಕೌಶಲ, ಬದ್ಧತೆ ಹಾಗೂ ಉತ್ತಮ ಮನೋಧೋರಣೆ ಇದ್ದಲ್ಲಿ ಯಶಸ್ಸು ಎಂಬುದು ಕಟ್ಟಿಟ್ಟ ಬುತ್ತಿ” ಎಂದರು.


ವಾಣಿಜ್ಯ ನಿಕಾಯದ ಡೀನ್ ಶಕುಂತಲಾ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗ ಮುಖ್ಯಸ್ಥೆ ಡಾ. ರತ್ನಾವತಿ ಕೆ. ಸ್ವಾಗತಿಸಿದರು. ಪ್ರಾಧ್ಯಾಪಕ ಭಾನುಪ್ರಕಾಶ್ ವಂದಿಸಿದರು. ಜೆನ್ನಿಫರ್ ಮತ್ತು ಹೆನ್ಸಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
To Top