ತೆಂಕನಿಡಿಯೂರು: ದಿನಾಂಕ 29/06/2023 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಉದ್ಯೋಗ ಮಾಹಿತಿ ಘಟಕ ಮತ್ತು ಉನ್ನತಿ ಪೌಂಡೇಶನ್ ಬೆಂಗಳೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಸಲಾಯಿತು.
ಸಂವಹನ ಕೌಶಲ್ಯ, ನಾಯಕತ್ವ ಕೌಶಲ್ಯ ಮೊದಲಾದ ಕೌಶಲ್ಯಗಳ ಬಗ್ಗೆ 90 ದಿನಗಳ ಕಾಲ ತರಬೇತಿ ನೀಡಿದ ಉನ್ನತಿ ಪೌಂಡೇಶನ್‍ನ ತರಬೇತುದಾರರಾದ ಶ್ರೀಮತಿ ಗ್ಲೋರಿಯಾ ಡಿ’ಸೋಜಾ ಅವರು ಸರಕಾರಿ ಕಾಲೇಜುಗಳ ವಿದ್ಯಾರ್ಥಿಗಳ ಗ್ರಹಿಕೆ, ಕೌಶಲ್ಯ ಅರಿವಿಕೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್‍ರೈ ಕೆ. ಅವರು ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಉದ್ಯೋಗ ಪಡೆದುಕೊಳ್ಳಲು ಮತ್ತು ತಮ್ಮ ಭವಿಷ್ಯ ಕಟ್ಟಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು. ಉದ್ಯೋಗ ಮಾಹಿತಿ ಘಟಕದ ಸಂಚಾಲಕರುಗಳಾದ ಶ್ರೀ ಉಮೇಶ್ ಪೈ ಸ್ವಾಗತಿಸಿದರೆ ಡಾ. ಹೆಚ್.ಕೆ. ವೆಂಕಟೇಶ ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ