ಕಾನೂನು ದುರುಪಯೋಗವಾಗದಂತೆ ನೋಡಿಕೊಳ್ಳುವುದು ಅಗತ್ಯ : ನ್ಯಾ.ಶರ್ಮಿಳಾ

Upayuktha
0

ತೆಂಕನಿಡಿಯೂರು: ಕಾನೂನು, ಸಂವಿಧಾನ ಹಾಗೂ ಕಾರ್ಯದರ್ಶಿಗಳ ದುರುಪಯೋಗವಾಗ ಬಾರದು ಅದಕ್ಕಾಗಿ ಅರಿವಿನ ಅಗತ್ಯವಿದೆಯೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಶ್ರೀಮತಿ ಶರ್ಮಿಳಾ ಹೇಳಿದರು.  ಬಹುತೇಕ ಪ್ರಕರಣಗಳಲ್ಲಿ ಕಾನೂನು ದುರುಪಯೋಗವಾಗುತ್ತಿದೆ ಮಾತ್ರವಲ್ಲದೆ ಅಮಾಯಕರು ಆರೋಪಿಗಳಾಗುತ್ತಿದ್ದಾರೆ ಆದುದರಿಂದ ಕಾನೂನುಗಳನ್ನು ಇಂದಿನ ಯುವ ಜನತೆ ಅರ್ಥಮಾಡಿಕೊಳ್ಳುವುದು ಮಾತ್ರವಲ್ಲದೆ ಸಮಾಜಿಕ ಅರಿವನ್ನು ಮೂಡಿಸುವ ಅಗತ್ಯವಿದೆ ಎಂದು ಅವರು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹೇಳಿದರು. 


ಅವರು ಕಾಲೇಜಿನ ಸಮಾಜಕಾರ್ಯ ವೇದಿಕೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಜರಗಿದ ಸಾಮಾನ್ಯರಿಗೆ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.  ಅದೇ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ರಾಜೇಶ ಪಡುಬಿದ್ರಿ ಪೋಕ್ಸೋ ಕಾಯಿದೆಯ ಕುರಿತಾಗಿ ಮಾಹಿತಿ ನೀಡಿದರು.  ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್‍ರೈ ಕೆ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  


ಸಮಾಜಕಾರ್ಯ ವಿಭಾಗದ ಉಪನ್ಯಾಸಕಿ ಡಾ. ಪ್ರಮೀಳಾ ಜೆ. ವಾಜ್ ಪ್ರಸ್ತಾವಿಕ ನುಡಿಗಳನ್ನಾಡಿದರು.  ವಿಭಾಗ ಮುಖ್ಯಸ್ಥ ಡಾ. ದುಗ್ಗಪ್ಪ ಕಜೆಕಾರ್, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಡಾ. ರಾಘವ ನಾಯ್ಕ, ಶ್ರೀ ತಿಮ್ಮಣ್ಣ ಜಿ. ಭಟ್ ಉಪಸ್ಥಿತರಿದ್ದರು.  ಪ್ರಥಮ ಎಂ.ಎಸ್.ಡಬ್ಲ್ಯೂ. ಲೀಲಾವತಿ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top