ತೆಂಕನಿಡಿಯೂರು ಕಾಲೇಜಿನಲ್ಲಿ ವನಮಹೋತ್ಸವ ಸಪ್ತಾಹ ಆಚರಣೆ

Upayuktha
0

  


ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ., ಎನ್.ಎಸ್.ಎಸ್. ಯೂತ್ ರೆಡ್‍ಕ್ರಾಸ್ ಹಾಗೂ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆ, ಉಡುಪಿ ವಲಯ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ (ಜು.6) ವನಮಹೋತ್ಸವ ಸಪ್ತಾಹದ ಅಂಗವಾಗಿ ಗಿಡ ನೆಡುವ ಮತ್ತು ಸಸಿ ವಿತರಣೆ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.  


ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಉಡುಪಿ ಜಿಲ್ಲಾ ನ್ಯಾಯಾಧೀಶರಾದ ಶ್ರೀಮತಿ ಶರ್ಮಿಳಾ ಎಸ್. ಅವರು ನಮ್ಮ ಪೂರ್ವಜರು ಸಾಕಷ್ಟು ಶ್ರಮ ವಹಿಸಿ ಬೆಳೆಸಿದ ಕಾಡನ್ನು ನಾವು ನಾಶ ಮಾಡಿದ್ದಲ್ಲದೆ ಇಂದು ಅಭಿವೃದ್ಧಿ ಹೆಸರಿನಲ್ಲಿ ಪ್ರಕೃತಿಯನ್ನು ಮತ್ತಷ್ಟು ನಾಶಪಡಿಸುತ್ತಿದ್ದೇವೆ.  ಕೇವಲ ದಿನಾಚರಣೆಗಳಿಗಷ್ಟೇ ಪರಿಸರ ಜಾಗೃತಿ ಸೀಮಿತವಾಗಿರದ ಪರಿಸರ ಸ್ನೇಹಿಯಾಗಿ ಬದುಕುವುದನ್ನು ನಾವು ರೂಢಿಸಿಕೊಂಡಾಗ ಮಾತ್ರ ಪರಿಸರದ ಉಳಿವು ಮತ್ತು ನಮ್ಮ ಉಳಿವು ಸಾಧ್ಯ ಎಂದರು. 


ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್‍ರೈ ಕೆ. ಅವರು ಮುಂದಿನ ಭವಿಷ್ಯವಾಗಿರುವ ಯುವ ಜನತೆ ಸಕ್ರೀಯರಾದ್ದಲ್ಲಿ ಪರಿಸರ ರಕ್ಷಣೆ ಯಶಸ್ವಿಯಾಗಬಲ್ಲದು ಎಂದರು.  ಅರಣ್ಯ ಇಲಾಖೆ ಉಡುಪಿಯ ವಲಯಾಧಿಕಾರಿ ಶ್ರೀ ಸುಬ್ರಹ್ಮಣ್ಯ ಆಚಾರ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ರಾಧಾಕೃಷ್ಣ, ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಕೆ.ಇ., ಯೂತ್ ರೆಡ್‍ಕ್ರಾಸ್ ಸಂಚಾಲಕರಾದ ಶ್ರೀ ಪ್ರಶಾಂತ ಎನ್. ಹಾಗೂ ಬೋಧಕ/ಬೋಧಕೇತರರು ಪಾಲ್ಗೊಂಡರು.  


ನಂತರದಲ್ಲಿ ಅರಣ್ಯ ಇಲಾಖೆಯಿಂದ ನೀಡಲಾದ ಮೌಲ್ಯಯುತವಾದ ಗಿಡಗಳನ್ನು ನಡೆವುದು ಮತ್ತು ವಿತರಿಸುವ ಕಾರ್ಯಕ್ರಮ ನೆರವೇರಿತು.  ಎನ್.ಎಸ್.ಎಸ್. ವಿದ್ಯಾರ್ಥಿ ನಾಯಕ ವಿಘ್ನೇಶ್ ಸ್ವಾಗತಿಸಿ, ಶ್ರದ್ಧಾ ವಂದಿಸಿ, ಪಲ್ಲವಿ ನಿರೂಪಿಸಿದರು. ಎನ್.ಎಸ್.ಎಸ್. ಹಾಗೂ ರೆಡ್‍ಕ್ರಾಸ್ ಸ್ವಯಂ ಸೇವಕರು ಕಾರ್ಯಕ್ರಮದ ಪ್ರಯೋಜನ ಪಡೆದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top