ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ

Upayuktha
0

ಉಡುಪಿ: ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಜುಲೈ 8 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.


ಅಂದು ಮಧ್ಯಾಹ್ನ 12 ಗಂಟೆಗೆ  ಪಡುಬಿದ್ರಿ ಮತ್ತು ಉಡುಪಿಯಲ್ಲಿ ಕಡಲ್ಕೊರೆತದಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡುವರು. ಮ. 2 ಗಂಟೆಗೆ ಮಣಿಪಾಲ ಟಿ.ಎಂ.ಎ ಪೈ ಆಡಿಟೋರಿಯಂ ನಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಲಾದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸುವರು.5 ಗಂಟೆಗೆ  ಜಿಲ್ಲಾಧಿಕಾರಿ ಕಚೇರಿಯಲ್ಲಿ,  ಜಿಲ್ಲೆಯಲ್ಲಿ ಅತಿವೃಷ್ಠಿಯಾಗುತ್ತಿದ್ದು ಈ ಬಗ್ಗೆ  ತೆಗೆದುಕೊಳ್ಳಬೇಕಾದ  ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ಕಾರ್ಯಪಡೆಯೊಂದಿಗೆ ಸಭೆ ನಡೆಸುವರು.  ನಂತರ ಸಂಜೆ 7.30 ಕ್ಕೆ ಮಂಗಳೂರಿಗೆ ತೆರಳಲಿರುವರು. 


 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top