ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆ: ಅರ್ಜಿ ಆಹ್ವಾನ

Upayuktha
0

 

ಉಡುಪಿ: ಕನ್ನಡ ಸಾಹಿತ್ಯ ಪರಿಷತ್ತು ನಡೆಸುವ 2023-24ನೆ ಯ ಸಾಲಿನ ʻಕನ್ನಡ ಪ್ರವೇಶʼ, ʻಕಾವʼ, ʻಜಾಣʼ ಹಾಗೂ ʻರತ್ನʼ ಪರೀಕ್ಷೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 


2023ರ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿರುವ ʻಕನ್ನಡ ಪ್ರವೇಶ, ಕಾವ, ಜಾಣ ಹಾಗೂ ರತ್ನʼ ಪರೀಕ್ಷೆಗಳಿಗೆ ಅರ್ಜಿಯನ್ನು ಸಲ್ಲಿಸಲು 2023ರ ಆಗಸ್ಟ್ 31 ಕೊನೆಯ ದಿನವಾಗಿದೆ. 2023ರ ಸೆಪ್ಟೆಂಬರ್ 15 ರ ವರೆಗೆ ದಂಡ ಶುಲ್ಕ ರೂ. 50-00 ಅನ್ನು ಹೆಚ್ಚುವರಿಯಾಗಿ ಪಾವತಿಸಿ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಪ್ರಕಟಣೆಯಲ್ಲಿ ತಿಳಿಸಿದೆ. ಪರೀಕ್ಷಾ ನಿಯಮಾವಳಿ ಹಾಗೂ ಅರ್ಜಿಯನ್ನು 25 ರೂ. ಶುಲ್ಕ ಪಾವತಿಸಿ, ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಚೇರಿಯಲ್ಲಿ ಇರುವ ಮಾರಾಟ ಮಳಿಗೆಯಲ್ಲಿ ದಿನಾಂಕ 01-07-2023 ರಿಂದ ಪಡೆಯಬಹುದಾಗಿದೆ. 


ಕನ್ನಡ ಸಾಹಿತ್ಯ ಪರಿಷತ್ತು, ಬೆಂಗಳೂರು ಹೆಸರಿಗೆ ಮೂವತ್ತು ರೂಪಾಯಿ ಮನಿಯಾರ್ಡರ್ ಮಾಡಿದರೆ ಅರ್ಜಿಯನ್ನು ತಾವು ನೀಡಿರುವ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸುವ ಸೌಲಭ್ಯವನ್ನು ಪರಿಷತ್ತು ಕಲ್ಪಿಸಿದೆ. ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಂತರ್ಜಾಲ ತಾಣ www.kasapa.in ಮೂಲಕ ಸಹ ಪಡೆದು ಕೊಳ್ಳಬಹುದು. ಅಂತರ್ಜಾಲದ ಮೂಲಕ ಅರ್ಜಿ ನಮೂನೆ ಪಡೆದವರು ಪರೀಕ್ಷಾ ಶುಲ್ಕದೊಂದಿಗೆ ಅರ್ಜಿ ಶುಲ್ಕ 25 ರೂ.ಗಳನ್ನು ಪ್ರತ್ಯೇಕವಾಗಿ ಪಾವತಿಸಬೇಕಾಗುವುದು. 


ಹೆಚ್ಚಿನ ವಿವರಗಳಿಗೆ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು- 560018, ದೂರವಾಣಿ ಸಂಖ್ಯೆ : 080-26612991, 22423867, 26623584 ಸಂಪರ್ಕಿಸಿ ಪಡೆದುಕೊಳ್ಳಬಹುದಾಗಿದೆ. ಡಾ.ಎಂ.ಪಿ.ಶ್ರೀನಾಥ ಅಧ್ಯಕ್ಷರು ,ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 9448558583.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top