ಉಜಿರೆ: ಶ್ರೀ ಧ.ಮಂ. ಪದವಿಪೂರ್ವ ಕಾಲೇಜು ಕನ್ನಡ ಸಂಘ ಉದ್ಘಾಟನೆ

Upayuktha
0

 


ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ 2023-24 ನೇ ಸಾಲಿನ ಕನ್ನಡ ಸಂಘದ ಕಾರ್ಯಚಟುವಟಿಕೆಯ ಉದ್ಘಾಟನೆಯು ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ  ಉದ್ಘಾಟಕರಾದ ಉಜಿರೆಯ  ಶ್ರೀ ಧ.ಮಂ. ಸನಿವಾಸ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ಸುನೀಲ್ ಪಂಡಿತ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಕನ್ನಡ ಭಾಷೆಯು ಅಗಾಧವಾದ ಸಾಹಿತ್ಯ ಸಂಪತ್ತನ್ನು ಹೊಂದಿದ್ದು, ಅದರ ಅಧ್ಯಯನದಿಂದ ಜೀವನ ಮೌಲ್ಯಗಳ ಬಗ್ಗೆ ಅರಿವು ಮೂಡುತ್ತದೆ. ಸಾಹಿತ್ಯದೊಲುಮೆ ಬೆಳೆಯಲು ಭಾಷೆಯ ಮೇಲೆ ಪ್ರೀತಿಯನ್ನು ಹೊಂದಬೇಕು. ವಿದ್ಯಾರ್ಥಿಗಳು ನಿರಂತರ ಹಾಗೂ ಗಂಭೀರವಾಗಿ ಓದುವುದರಿಂದ ಪ್ರಬುದ್ಧ ವ್ಯಕ್ತಿತ್ವ ಹೊಂದಬಹುದೆಂದು ಅಭಿಪ್ರಾಯಪಟ್ಟರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಶ್ರೀ ಪ್ರಮೋದ್ ಕುಮಾರ್ ಅವರು  ವಹಿಸಿದ್ದರು. ವೇದಿಕೆಯಲ್ಲಿ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಡಾ ರಾಜೇಶ್ ಬಿ ಅವರು ಉಪಸ್ಥಿತರಿದ್ದರು. ಮಲ್ಲಿಕಾ ಅವರನ್ನು ಕನ್ನಡ ಸಂಘದ 23-24ನೇ ಸಾಲಿನ ವಿದ್ಯಾರ್ಥಿ ಕಾರ್ಯದರ್ಶಿಯನ್ನಾಗಿ ನಿಯುಕ್ತಿಗೊಳಿಸಲಾಯಿತು. ವಿದ್ಯಾರ್ಥಿಗಳಾದ ಮಲ್ಲಿಕಾ ಸ್ವಾಗತಿಸಿದರು. ರುಕ್ಮವ್ವ  ಅತಿಥಿಗಳನ್ನು ಪರಿಚಯಿಸಿದರು. ತನು ಹೆಗ್ಡೆ ಕಾರ್ಯಕ್ರಮ ನಿರ್ವಹಿಸಿದರು ಹಾಗೂ ನಿಧಿ ವಂದನಾರ್ಪಣೆಗೈದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top