ನಾಳೆ: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ

Upayuktha
0

 ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ 



ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ.

ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಚಿಕ್ಕಮಗಳೂರಿನ ಸಾಹಿತಿ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಪ್ರಧಾನ ಉಪನ್ಯಾಸ ನೀಡಲಿದ್ದಾರೆ. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.


ಕುವೆಂಪು ಕಾವ್ಯ ಗಾಯನ, ಕುವೆಂಪು ಕುರಿತ ಕವಿತೆಗಳ ವಾಚನ, ಕುವೆಂಪು ಪುಸ್ತಕಗಳ ವಿಮರ್ಶೆ, ‘ಶ್ಮಶಾನ ಕುರುಕ್ಷೇತ್ರ’ ನಾಟಕದ ಒಂದು ದೃಶ್ಯ ಪ್ರದರ್ಶನ ಹಾಗೂ ‘ಶ್ರೀ ರಾಮಾಯಣ ದರ್ಶನಂ’ ಕಾವ್ಯ ಭಾಗ ವಾಚನ ಕಾರ್ಯಕ್ರಮಗಳು ಸಂಕಿರಣದ ವಿಶೇಷ ಭಾಗವಾಗಿರಲಿವೆ ಎಂದು ಎಸ್.ಡಿ.ಎಂ. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಬೋಜಮ್ಮ ಕೆ.ಎನ್. ತಿಳಿಸಿದ್ದಾರೆ.      


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top