ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ರಕ್ಷಕ- ಶಿಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Chandrashekhara Kulamarva
0

 



ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಕಾಸರಗೋಡಿನ ಉಕ್ಕಿನಡ್ಕದ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.


ರಕ್ಷಕ-ಶಿಕ್ಷಕ ಸಂಘದ ರಚನೆ ಕಾಲೇಜಿನ ಆಡಳಿತ ಮಂಡಳಿಯವರ ಸಮ್ಮುಖದಲ್ಲಿ ನಡೆಯಿತು. ಸಂಘ ಸಭೆಯಲ್ಲಿ ಆಯ್ಕೆ ಪ್ರಕಿಯೆ ನೆರವೇರಿತು. ಉಪಾಧ್ಯಕ್ಷರಾಗಿ ವಿವೇಕಾನಂದ ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಆಶಾ ಬೆಳ್ಳಾರೆ ಮತ್ತು ಪುತ್ತೂರಿನ ಅಕ್ಷಯ ಮೋಟರ‍್ಸ್ನ ಮಾಲಿಕ ಶಿವಪ್ರಸಾದ್ ಸಿ. ಎಚ್ ಆಯ್ಕೆಯಾದರು. ಕಾರ್ಯದರ್ಶಿಯಾಗಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಮತ್ತು ಜೊತೆ ಕಾರ್ಯದರ್ಶಿಯಾಗಿ ಕಡಬದ ಕಂಪ್ಯೂಟರ್ ಹಾರ್ಡ್ವೇರ್ ಸಂಸ್ಥೆಯ ಮಾಲಕ ಹಾಗೂ ಕೃಷಿಕ ಪ್ರಸನ್ನ ಕುಮಾರ್ ಎಂ. ಎಸ್ ಹಾಗೂ ಪುತ್ತೂರಿನ ಎಸ್ ಬಿ ಐ ಸೇವಾ ಕೇಂದ್ರದ ಪ್ರೊವೈಡರ್ ವೀಣಾಕಿರಣ ಬಿ ನೇಮಕಗೊಂಡರು. ಸುಮಾರು 25 ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.


ರಕ್ಷಕ- ಶಿಕ್ಷಕ ಸಂಘದ ನೂತನ ಅಧ್ಯಕ್ಷ ಕೃಷ್ಣಪ್ರಕಾಶ್ ಬಳ್ಳಂಬೆಟ್ಟು ಮಾತನಾಡಿ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಪೂರಕವಾಗಿ ಪೋಷಕರು ಹಾಗೂ ಶಿಕ್ಷಕರು ಸ್ಪಂದಿಸಲು ರಕ್ಷಕ-ಶಿಕ್ಷಕ ಸಂಘವು ಸದಾ ಕಾರ್ಯೋಮ್ಮುಖವಾಗಿರುತ್ತದೆ. ಕಾಲೇಜಿನ ಅಭಿವೃದ್ಧಿಗೆ ರಕ್ಷಕ-ಶಿಕ್ಷಕ ಸಂಘವು ಇನ್ನಷ್ಟು ಬಲ ತುಂಬುವ ಪ್ರಯತ್ನವನ್ನು ಮಾಡುತ್ತದೆ ಎಂದು ಎಲ್ಲರ ಸಹಕಾರವನ್ನು ಕೋರಿದರು. 2022-23ನೇ ಸಾಲಿನ ಶಿಕ್ಷಕ- ರಕ್ಷಕ ಸಂಘದ ಅಧ್ಯಕ್ಷ ಹರಿಕಿರಣ್ ಕೆ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.


ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಮಾತನಾಡಿ ವಿದ್ಯಾರ್ಥಿ, ಪಾಲಕ, ಶಿಕ್ಷಕ, ಆಡಳಿತ ಮಂಡಳಿ ಈ ನಾಲ್ಕು ವಿಭಾಗಗಳಿಂದ ಸಮಾನ ರೀತಿಯ ಆಸಕ್ತಿ ಮತ್ತು ಪ್ರೋತ್ಸಾಹ ಸಿಕ್ಕಿದಾಗ ಶಿಕ್ಷಣ ಸಂಸ್ಥೆ ಅಭಿವೃದ್ಧಿ ಹೊಂದಲು ಸಾಧ್ಯ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಕಾಲೇಜಿನ ಆಡಳಿತ ಮಂಡಳಿ ವಿಶೇಷ ಅನುದಾನ ಮತ್ತು ಪ್ರೋತ್ಸಾಹ ನೀಡಲು ಸದಾ ಸಿದ್ದ ಎಂದರು.


ಗತವರ್ಷದ ಆಯವ್ಯಯ, ಕಾರ್ಯಕ್ರಮಗಳ ಬಗ್ಗೆ ಚರ್ಚಿಸಲಾಯಿತು. 2023-24ನೇ ಶೈಕ್ಷಣಿಕ ವರ್ಷದಲ್ಲಿ ನಡೆಸಬಹುದಾದ ಕಾರ್ಯಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲಾಯಿತು. ಪ್ರಾಂಶುಪಾಲ ಮಹೇಶ ನಿಟಿಲಾಪುರ ಪ್ರಾಸ್ತವಿಕ ನುಡಿಗಳನ್ನಾಡಿದರು. ಕಾರ್ಯಕ್ರಮವನ್ನು ಉಪನ್ಯಾಸಕಿ ದಿವ್ಯಾ ಜಿ ನಿರೂಪಿಸಿ ಸ್ವಾಗತಿಸಿದರು. ಉಪನ್ಯಾಸಕಿ ರಶ್ಮಿ ಪಿ ವಂದಿಸಿದರು.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

إرسال تعليق

0 تعليقات
إرسال تعليق (0)
To Top