VTU ರಾಜ್ಯಮಟ್ಟದ ಕ್ರಾಸ್-ಕಂಟ್ರಿ ಸ್ಪರ್ಧೆ: VCET ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್‍ಶಿಪ್

Upayuktha
0



ಪುತ್ತೂರು:
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ತಂಡವು 2023-24ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ 10 ಕಿಮೀ ಕ್ರಾಸ್-ಕಂಟ್ರಿ ಸ್ಪರ್ಧೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಚಾಂಪಿಯನ್‍ಶಿಪ್ ಹಾಗೂ ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನದೊಂದಿಗೆ ಸಮಗ್ರ ತಂಡ ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಕೋಲಾರದ ಡಾ.ತಿಮ್ಮಯ್ಯ ಇನ್ಶ್ತಿಟ್ಯೂಟ್ ಆಫ್ ಟೆಕ್ನಾಲಜಿಯ ಆಶ್ರಯದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ವಿಶಿಷ್ಟ ಸಾಧನೆಯನ್ನು ಮಾಡಿದ್ದಾರೆ. 


ಮಹಿಳೆಯರ ವಿಭಾಗದಲ್ಲಿ ದ್ವಿತೀಯ ವರ್ಷದ ಎಂಬಿಎ ವಿಭಾಗದ ರಕ್ಷಿತಾ.ಐ ಪ್ರಥಮ ಸ್ಥಾನ, ದ್ವಿತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವಿದ್ಯಾ.ಟಿ.ಎಸ್ ತೃತೀಯ ಸ್ಥಾನ, ದ್ವಿತೀಯ ವರ್ಷದ ಎಂಬಿಎ ವಿಭಾಗದ ಪವಿತ್ರ.ಜಿ 4ನೇ ಸ್ಥಾನ, ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಜೀಕ್ಷಿತಾ.ಕೆ 5ನೇ ಸ್ಥಾನ, ಪ್ರಥಮ ವರ್ಷದ ಡೇಟಾ ಸೈನ್ಸ್ ವಿಭಾಗದ ಅಶ್ವಿನಿ 7ನೇ ಸ್ಥಾನ ಹಾಗೂ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಮಂಜುಶ್ರೀ.ಎ 8ನೇ ಸ್ಥಾನವನ್ನು ಪಡೆದು ಮಹಿಳೆಯರ ವಿಭಾಗದ ಸಮಗ್ರ ಪ್ರಶಸ್ತಿಯನ್ನು ಗಳಿಸಿಕೊಂಡಿದ್ದಾರೆ.


ಪುರುಷರ ವಿಭಾಗದಲ್ಲಿ ತೃತೀಯ ವರ್ಷದ ಮೆಕ್ಯಾನಿಕಲ್ ವಿಭಾಗದ ಶರತ್.ಕೆ.ಎಸ್ 11ನೇ ಸ್ಥಾನ, ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ವೈಭವ್ ನಾಣಯ್ಯ 19ನೇ ಸ್ಥಾನ, ದ್ವಿತೀಯ ವರ್ಷದ ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ವಿಭಾಗದ ಅನ್ವಿತ್.ಬಿ.ಎನ್ 20ನೇ ಸ್ಥಾನ, ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ಅಭಿನಂದನ್.ಎ 26ನೇ ಸ್ಥಾನ, ಪ್ರಥಮ ವರ್ಷದ ಮೆಕ್ಯಾನಿಕಲ್ ವಿಭಾಗದ ಸಂಭ್ರಮ್.ಜಿ 27ನೇ ಸ್ಥಾನ ಹಾಗೂ ತೃತೀಯ ವರ್ಷದ ಎಲೆಕ್ಟ್ರಾನಿಕ್ಸ್ ವಿಭಾಗದ ಸೋಮಣ್ಣ.ಎಂ.ಬಿ 31ನೇ ಸ್ಥಾನವನ್ನು ಪಡೆದು ಪುರುಷರ ವಿಭಾಗದಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.


ಮಹಿಳೆಯರ ವಿಭಾಗದಲ್ಲಿ ವಿಜೇತರಾದ ವಿದ್ಯಾ.ಟಿ.ಎಸ್, ಜೀಕ್ಷಿತಾ.ಕೆ, ಅಶ್ವಿನಿ ಹಾಗೂ ಮಂಜುಶ್ರೀ.ಎ ಇವರು 2023-24ನೇ ಸಾಲಿನ ಅಖಿಲ ಭಾರತ ಅಂತರ್ ವಿಶ್ವವಿದ್ಯಾನಿಲಯ ಕ್ರಾಸ್-ಕಂಟ್ರಿ ಓಟದ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ.


ಕಾಲೇಜಿನ ತಂಡವು ಕಳೆದ ಎರಡು ವರ್ಷಗಳಿಂದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಚಾಂಪಿಯನ್ ಪಟ್ಟವನ್ನು ಗಳಿಸಿಕೊಂಡಿದ್ದು, ಇಲ್ಲಿನ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿದ್ದಾರೆ.


ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಅವರ ಮಾರ್ಗದರ್ಶನದಲ್ಲಿ ಭಾರತೀಯ ಸೇನಾಪಡೆಗಳ ವಿಶ್ರಾಂತ ಅತ್ಲೆಟಿಕ್ ತರಬೇತುದಾರ ರವಿಶಂಕರ್ ಮುಕುಂದ ತರಬೇತಿಯನ್ನು ನೀಡಿದ್ದರು ಎಂದು ಪ್ರಾಂಶುಪಾಲ ಡಾ.ಮಹೇಶ್ ಪ್ರಸನ್ನ.ಕೆ ತಿಳಿಸಿದ್ದಾರೆ.

 

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter  

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top