ಮಂಗಳೂರು: ಬಹುಮುಖ ಪ್ರತಿಭೆಯ ಹಿರಿಯ ಪತ್ರಕರ್ತ ಜಿತೇಂದ್ರ ಕುಂದೇಶ್ವರ ಇದೀಗ ಕನ್ನಡ ಟಿವಿ ಧಾರಾವಾಹಿಯ ಕಲಾವಿದರಾಗಿಯೂ ಕಾಣಿಸಿಕೊಂಡಿದ್ದಾರೆ. ಝೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿ 'ಗಟ್ಟಿಮೇಳ'ದಲ್ಲಿ ಸ್ವಾಮೀಜಿಯ ಪಾತ್ರದಲ್ಲಿ ನಟಿಸಿರುವ ಅವರು, ಮನೋಜ್ಞ ಅಭಿನಯ ನೀಡಿದ್ದಾರೆ.
ಶಾಲಾ ದಿನಗಳಿಂದಲೇ ನಾಟಕ, ಯಕ್ಷಗಾನಗಳಲ್ಲಿ ವಿವಿಧ ಪಾತ್ರಗಳನ್ನು ನಿರ್ವಹಿಸುತ್ತಿದ್ದ ಜಿತೇಂದ್ರ ಕುಂದೇಶ್ವರ ಅವರು, ಕೆಲವು ತುಳು ಸಿನಿಮಾಗಳಲ್ಲೂ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಇದೀಗ ಕನ್ನಡ ಟಿವಿ ಧಾರಾವಾಹಿಗೆ ಬಣ್ಣ ಹಚ್ಚಿರುವುದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಎರಡೂವರೆ ದಶಕಗಳ ಅನುಭವ ಹೊಂದಿರುವ ಅವರು, ಸ್ಥಳೀಯ ಕೇಬಲ್ ಟಿವಿ ವಾಹಿನಿಗಳಲ್ಲಿ ವಿಶೇಷ ಚರ್ಚಾಕೂಟಗಳನ್ನೂ ನಡೆಸಿಕೊಡುತ್ತಿದ್ದಾರೆ.
ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯೂ ಆಗಿರುವ ಅವರು, ವಿವಿಧ ಆಯಾಮಗಳಲ್ಲಿ ಪ್ರತಿಭಾ ಪ್ರದರ್ಶನ ಮಾಡುತ್ತಿದ್ದಾರೆ. ಅವರಿಗೆ ಚಿತ್ರರಂಗ ಮತ್ತು ಮನರಂಜನಾ ಕ್ಷೇತ್ರದಲ್ಲಿ ಅವರಿಗೆ ಇನ್ನಷ್ಟು ಅವಕಾಶಗಳು ಒದಗಿ ಬರಲಿ ಎಂದು ಹಾರೈಸೋಣ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ