ಆ.6: ಕಸಾಪ ಸಭಾಂಗಣದಲ್ಲಿ ಕನ್ನಡ ಸ್ಪಷ್ಟ ಬರೆವಣಿಗೆ ಕಮ್ಮಟ

Upayuktha
0

ಬೆಂಗಳೂರು: ಅಕ್ಷರ ಚಪ್ಪರ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆಯಿಂದ ‘ಕನ್ನಡ ಸ್ಪಷ್ಟ ಬರೆವಣಿಗೆ ಕಮ್ಮಟ ಕಾರ್ಯಕ್ರಮ’ವನ್ನು ಆಗಸ್ಟ್ 6, ಭಾನುವಾರದಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಚಾಮರಾಜಪೇಟೆ ಪಂಪ ಮಹಾಕವಿ ರಸ್ತೆ ಹತ್ತಿರದ ಕನ್ನಡ ಸಾಹಿತ್ಯ ಪರಿಷತ್ತು ಅಕ್ಕಮಹಾದೇವಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.


ಕನ್ನಡದ ಬಳಕೆಯಲ್ಲಿ ಎದುರಾಗುವ ಸಮಸ್ಯೆಗಳಿಗೆ ಖಚಿತ ಪರಿಹಾರವನ್ನು ದೊರಕಿಸಿಕೊಡುವ ಉದ್ದೇಶ ಈ ಕಮ್ಮಟದ್ದು. ಆಸಕ್ತರೂ ರೂ. 150/- ರೂ ಗಳನ್ನು (ವಿದ್ಯಾರ್ಥಿಗಳಿಗೆ 100/-ರೂ) ಪಾವತಿಸಿ ನೋಂದಾಯಿಸಿಕೊಳ್ಳಬಹುದು. ಮೊದಲ 60 ಅಭ್ಯರ್ಥಿಗಳಿಗೆ ಮಾತ್ರ ಪ್ರವೇಶಾವಕಾಶವಿದೆ.


ಕಮ್ಮಟದಲ್ಲಿ ಭಾಗವಹಿಸುವವರಿಗೆ ಲೇಖನ ಸಾಮಗ್ರಿ ಮತ್ತು ಪ್ರಮಾಣಪತ್ರವನ್ನು ನೀಡಲಾಗುತ್ತದೆ. ಕನ್ನಡದಲ್ಲಿ ಬರೆಯುತ್ತಿರುವ ಲೇಖಕರಿಗೆ, ಶಿಕ್ಷಕರಿಗೆ, ಪತ್ರಕರ್ತರಿಗೆ ಮತ್ತು ವಿದ್ಯಾರ್ಥಿಗಳಿಗೆ ಇದೊಂದು ಮಾರ್ಗದರ್ಶಿ ಕಮ್ಮಟ ಎಂದು ಕಮ್ಮಟದ ನಿರ್ದೇಶಕ ಕೆ. ರಾಜಕುಮಾರ್ ಹಾಗೂ ಕಮ್ಮಟದ ಸಂಚಾಲಕ ದೀಕ್ಷಿತ್ ನಾಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಹೆಚ್ಚಿನ ಮಾಹಿತಿಗಾಗಿ, ಮೊಬೈಲ್ ಸಂಖ್ಯೆ 7406854007 ಅನ್ನು ಸಂಪರ್ಕಿಸಬಹುದು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top