ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಂತೋಷ್ ಎನ್ನುವ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡಾಗ ಸಚಿವರಾಗಿದ್ದ ಈಶ್ವರಪ್ಪ ವಿರುದ್ಧ ಆರೋಪ ಹೊರಿಸಲಾಗಿತ್ತು. ಅಂದು ಆರೋಪ ಬಂದ ತಕ್ಷಣ ಈಶ್ವರಪ್ಪ ಅವರು ರಾಜೀನಾಮೆ ಸಲ್ಲಿಸಿ ತನಿಖೆಗೆ ಸಹಕರಿಸಿದ್ದರು. ಆದರೆ ಈಗ ಬಿಬಿಎಂಪಿ ಗುತ್ತಿಗೆದಾರ ಗೌತಮ್ ಎಂಬವರು ಬಿಲ್ ಪಾವತಿ ಮಾಡಲು ಸತಾಯಿಸಲಾಗುತ್ತಿದೆ ಎಂಬ ಕೊರಗಿನಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅಲ್ಲದೆ ಕೃಷಿ ಇಲಾಖೆಯಲ್ಲಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿ ಬಂದಿದೆ. ಗುತ್ತಿಗೆದಾರರ ಸಂಘದ ಕೆಲವರು ಡಿಸಿಎಂ ಸಹಿತ ಸರಕಾರದ ಕೆಲವು ಸಚಿವರನ್ನು ಉದ್ದೇಶಿಸಿ ಕಮಿಷನ್ ಆರೋಪ ಮಾಡಿದ್ದಾರೆ. ಈಗ ಕಾಂಗ್ರೆಸ್ ಅವರ ರಾಜೀನಾಮೆ ಪಡೆಯದೆ ಯಾಕೆ ಮೌನ ವಹಿಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಕೇವಲ ಎರಡೂವರೆ ತಿಂಗಳಲ್ಲಿ ಸರಕಾರದ ಮೇಲೆ ಕಮಿಷನ್ ದಂಧೆ ಆರೋಪ ಕೇಳಿ ಬಂದಿದೆ. ಹಳೆ ಬಿಲ್ ಪಾವತಿಗೂ ಕಮಿಷನ್ ಕೇಳಲಾಗುತ್ತಿದೆ ಎಂದು ಸ್ವತಃ ಗುತ್ತಿಗೆದಾರರು ಆರೋಪಿಸಿದ್ದಾರೆ. ಒಟ್ಟಿನಲ್ಲಿ ಕಾಮಗಾರಿಗಳ ಹಾಗೂ ವರ್ಗಾವಣೆ ದಂಧೆ ಮೂಲಕ ಕಾಂಗ್ರೆಸ್ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಂತಿದೆ ಎಂದು ಅವರು ಆರೋಪಿಸಿದರು.
ಬಿಜೆಪಿ ಸರಕಾರದ ಅವಧಿಯಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿರುವ ಕಮಿಷನ್ ದಂಧೆ ಆರೋಪದ ಬಗ್ಗೆ ಹೋರಾಟ ನಡೆಸಿದ್ದ ಕಾಂಗ್ರೆಸ್ ಇಂದು ಕೆಂಪಣ್ಣ ಅವರ ಆರೋಪ ಸುಳ್ಳು ಎಂದು ಬಿಂಬಿಸುತ್ತಿದೆ. ಅಂದು ಹೋರಾಟ ನಡೆಸಿದ್ದ ಕಾಂಗ್ರೆಸ್ ಈಗ ತಮ್ಮದೇ ಸರಕಾರದ ಬಗ್ಗೆ ಆರೋಪ ಕೇಳಿ ಬಂದಾಗ ಯಾಕೆ ತಮ್ಮವರನ್ನು ಸಮರ್ಥಿಸಿ ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ