ಮಕ್ಕಳಲ್ಲಿ ದೇಶಸ್ನೇಹದ ಚಿಂತನೆಯ ಬೀಜವನ್ನು ಬಿತ್ತಬೇಕು: ಬಾಲಸುಬ್ರಹ್ಮಣ್ಯ ಭಟ್
ಕುಂಬಳೆ: ದೇಶಕ್ಕಾಗಿ ನಮ್ಮ ಸೇವೆ, ಕರ್ತವ್ಯವನ್ನು ಸಮರ್ಥವಾಗಿ ನಿಭಾಯಿಸುವತ್ತ ಪ್ರತಿಯೊಬ್ಬರು ಚಿಂತಿಸಿದರೆ ಮಾತ್ರ ನಮ್ಮ ಪೀಳಿಗೆಯ ಮಕ್ಕಳು ದೇಶದ ಉತ್ತಮ ಪ್ರಜೆಗಳಾಗಬಲ್ಲರು. ಅವರಲ್ಲಿ ದೇಶಸ್ನೇಹದ ಚಿಂತನೆಯನ್ನು ಹರಿಯಬಿಡಬೇಕು ಎಂದು ವಿದ್ಯಾಲಯದ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಬಾಲಸುಬ್ರಹ್ಮಣ್ಯ ಭಟ್ ಚೆಕ್ಕಣಿಕೆ ಹೇಳಿದರು.
ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಮಂಗಳವಾರ ಜರಗಿದ ಸ್ವಾತಂತ್ರ್ಯ ಮಹೋತ್ಸವದ ಸಂದರ್ಭದಲ್ಲಿ ಧ್ವಜಾರೋಹಗೈದು ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಆಡಳಿತ ಸಮಿತಿ ಕಾರ್ಯದರ್ಶಿ ಶ್ಯಾಮರಾಜ್ ದೊಡ್ಡಮಾಣಿ, ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಉಪಮುಖ್ಯಶಿಕ್ಷಕಿ ಚಿತ್ರಾಸರಸ್ವತಿ ಪೆರಡಾನ ಮಾತನಾಡಿದರು.
ವಿದ್ಯಾರ್ಥಿಗಳಾದ ಧನ್ವಿ ಬಿ.ಕೆ ಸ್ವಾಗತಿಸಿ, ಪೃಥ್ವಿ ಎಂ ಧನ್ಯವಾದವಿತ್ತರು. ವಿದ್ಯಾರ್ಥಿ ಕನಿಹ ಎಂ ನಿರೂಪಿಸಿದರು. ಈ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ಪೂರ್ಣ ಎ+ ಪಡೆದ ವಿದ್ಯಾರ್ಥಿಗಳಿಗೆ ಸೂರಂಬೈಲಿನ ಜೈಹಿಂದ್ ಆರ್ಟ್ಸ್ ಎಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಗೌರವಿಸಿದರು. ವೇದಮೂರ್ತಿ ಕೋಣಮ್ಮೆ ಮಹಾದೇವ ಭಟ್ ಹಾಗೂ ಶ್ರೀಕೃಷ್ಣ ಆರ್ಟ್ಸ್ ಮತ್ತು ಸ್ಪೋರ್ಟ್ಸ್ ಕ್ಲಬ್ ಮುಜುಂಗಾವು ಇವರ ಪ್ರಾಯೋಜಕತ್ವದಲ್ಲಿ ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ