ಭಾರತವನ್ನು ವಿಶ್ವ ಗುರುವನ್ನಾಗಿ ಮಾಡುವುದು ನಮ್ಮ ಜವಾಬ್ದಾರಿ: ಡಾ. ಪ್ರಭಾಕರ ಭಟ್ ಕಲ್ಲಡ್ಕ

Upayuktha
0

ಪುತ್ತೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 76 ವರ್ಷಗಳು ಕಳೆದಿದೆ. ಅದಕ್ಕಾಗಿ ಕೋಟ್ಯಾಂತರ ಜನರ ಬಲಿದಾನವಾಗಿದ್ದು, ಅವರ ಆ ಬಲಿದಾನದಿಂದಾಗಿಯೇ ನಮ್ಮ ನೆಲದ ಮೌಲ್ಯ, ನಮ್ಮ ಜೀವನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ನಮ್ಮ ದೇಶ ಉಳಿದ ದೇಶಗಳಿಗಿಂತ ಭಿನ್ನವಾಗಿದ್ದು ಇಲ್ಲಿ ನಾವು ಕಲ್ಲು, ಮಣ್ಣು, ನೀರಲ್ಲಿ ದೇವರನ್ನು ಕಾಣುತ್ತೇವೆ. ವ್ಯಕ್ತಿಯನ್ನು ಪೂಜೆ ಮಾಡದೆ ದೇಶವನ್ನು ಪೂಜೆ ಮಾಡುವ ಜನ ಭಾರತೀಯರಾಗಿದ್ದಾರೆ ಎಂದು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.


ಇವರು ಇಲ್ಲಿನ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಡಿಯಲ್ಲಿ ಆಚರಿಸಲಾದ 77ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಮಡಿದವರಲ್ಲಿ ದೇಶಭಕ್ತಿ ಇತ್ತು. ಹಾಗೆಯೇ ಈ ಮಣ್ಣಿನ ಭಾವನೆಯನ್ನು ಉದ್ದೀಪನೆ ಮಾಡಿದ ಫಲವಾಗಿ ಇಂದು ನಮ್ಮತನವನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ಬ್ರಿಟಿಷರು ದೇಶದ ಸಂಪತ್ತನ್ನು ಲೂಟಿ ಮಾಡಬಹುದು, ಆದರೆ ನಮ್ಮ ಆಧ್ಯಾತ್ಮಿಕತೆಯನ್ನು ಲೂಟಿ ಮಾಡಲು ಆಗುವುದಿಲ್ಲ. ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರು ಅವರ ಕುಟುಂಬದವರಿಗಾಗಿ ಬದುಕಲಿಲ್ಲ ದೇಶಕ್ಕಾಗಿ ಮಡಿದರು. ಭಾರತದಲ್ಲಿ ದೇವರೆ ಹುಟ್ಟಿದ್ದಾನೆ ಅದಕ್ಕಾಗಿ ಇದು ದೇವರ ನಾಡು. ಇಂತಹ ಪವಿತ್ರ ಭೂಮಿಯಲ್ಲಿ ಜನಿಸಿದ್ದು ನಮ್ಮ ಪುಣ್ಯ.ಜಗತ್ತಿಗೆ ಏನು ಬೇಕು ಅದನ್ನು ಕೊಡುವ ತಾಕತ್ತು ಭಾರತಕ್ಕಿದೆ.ಈ ದೇಶವನ್ನು ಜಗತ್ತಿನ ವಿಶ್ವಗುರುವನ್ನಾಗಿ ಮಾಡುತ್ತೇನೆ ಎಂಬ ಸಂಕಲ್ಪ ನಮ್ಮದಾಗಿರಲಿ ಎಂದು ನುಡಿದರು.


ಕಾರ್ಯಕ್ರಮದಲ್ಲಿ ತೃತೀಯ ಪತ್ರಿಕೋದ್ಯಮ ವಿದ್ಯಾರ್ಥಿಗಳ ಸ್ವಾತಂತ್ರ್ಯೋತ್ಸವದ ವಿಶೇಷ ಸಂಚಿಕೆಯಾದ  ವಿಕಸನ ಪ್ರಾಯೋಗಿಕ ಪತ್ರಿಕೆಯನ್ನು ಅನಾವರಣಗೊಳಿಸಿದರು. ಸುಮಾರು ಆರು ಸಾವಿರ ವಿದ್ಯಾರ್ಥಿಗಳು ಧ್ವಜಾರೋಹಣದಲ್ಲಿ ಪಾಲ್ಗೊಂಡಿದ್ದರು.


ಕಾರ್ಯಕ್ರಮದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ.ಕೆ.ಎಂ ಕೃಷ್ಣ ಭಟ್ ಹಾಗೆಯೇ ಆಡಳಿತ  ಮಂಡಳಿಯ ಅಧ್ಯಕ್ಷರು, ಸಂಚಾಲಕರು, ಸದಸ್ಯರು, ನಿರ್ದೇಶಕರು, ವಿವೇಕಾನಂದ ಪದವಿ ಕಾಲೇಜು, ಪದವಿಪೂರ್ವ ಕಾಲೇಜು, ಪಾಲಿಟೆಕ್ನಿಕ್, ಇಂಜಿನಿಯರಿಂಗ್ & ಟೆಕ್ನಾಲಜಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಇಲ್ಲಿನ ಪ್ರಾಂಶುಪಾಲರು, ಬೋಧಕ -ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಕಾರ್ಯಕ್ರಮವನ್ನು ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ವಿದ್ಯಾ ಎಸ್ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top