ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಹೈಯರ್ ಸೆಕೆಂಡರಿ ವಿಭಾಗದ ಪ್ರಾಂಶುಪಾಲರಾದ ರಾಮಚಂದ್ರಭಟ್ ಧ್ವಜಾರೋಹಣವನ್ನು ನೆರವೇರಿಸಿ ಶುಭಹಾರೈಸಿದರು.
ಕರ್ನಾಟಕ ಸ್ಕೌಟ್ ಕಮಿಶನರ್ ಆಗಿ ಕಾರ್ಯನಿರ್ವಹಿಸಿದ ಗುರುಮೂರ್ತಿ ನಾಯ್ಕಾಪು ಇವರು ವಿಶೇಷ ಅಭ್ಯಾಗತರಾಗಿ ಆಗಮಿಸಿ, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾದ ಶಿಸ್ತು, ರಾಷ್ಟ್ರ ಪ್ರೇಮದ ಕುರಿತು ಅರಿವನ್ನು ಮೂಡಿಸಿದರು. ಶಾಲಾ ವ್ಯವಸ್ಥಾಪಕ ಶಂಕರನಾರಾಯಣ ಭಟ್ ಸಭಾಧ್ಯಕ್ಷತೆಯನ್ನು ನಿರ್ವಹಿಸಿದರು.
ಪಿ.ಟಿ.ಎ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಕುಡಾಲು, ಎಂ.ಪಿ.ಟಿ.ಎ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಕಮಲಾಕ್ಷ ಶುಭಾಶಂಸನೆಗೈದರು. ಮುಖ್ಯೋಪಾಧ್ಯಾಯರಾದ ಇ.ಎಚ್ ಗೋವಿಂದ ಭಟ್ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪಿ.ಟಿ.ಎ ಸದಸ್ಯರಾದ ವೇಣುಗೋಪಾಲ್ ಶೆಟ್ಟಿ, ಅಶ್ರಫ್ ಸೋಕೆ ಉಪಸ್ಥಿತರಿದ್ದರು. ಅಧ್ಯಾಪಿಕೆ ಶಿಲ್ಪಾ ವಂದಿಸಿದರು. ಅಧ್ಯಾಪಕ ಶಶಿಧರ ಕೆ. ಕಾರ್ಯಕ್ರಮವನ್ನು ನಿರೂಪಿಸಿದರು.
ಇದೇ ಸಂದರ್ಭದಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಹಾಗೂ ಶಾಲಾ ಮಟ್ಟದಲ್ಲಿ ಆಯೋಜಿಸಿದ ವಿವಿಧ ಶಾಸ್ತ್ರಮೇಳಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಬಳಿಕ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಸಿಹಿತಿಂಡಿಯನ್ನು ವಿತರಿಸಲಾಯಿತು. ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಂಪನ್ನಗೊಂಡಿತು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಧನ್ಯವಾದಗಳು
ReplyDelete