ರಾಜ್ಯ ವಿಧಾನಸಭಾ ಕಲಾಪ ಡಿಜಿಟಲೀಕರಣಕ್ಕೆ ಚಿಂತನೆ: ಯು.ಟಿ. ಖಾದರ್

Upayuktha
0

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮಾಧ್ಯಮ ಸಂವಾದ



ಮಂಗಳೂರು: ರಾಜ್ಯದಲ್ಲಿಯೂ ವಿಧಾನಸಭಾ ಕಲಾಪವನ್ನು ಡಿಜಿಟಲೀಕರಣಗೊಳಿಸಿ ಪೇಪರ್ ರಹಿತ ಸದನವಾಗಿ ಪರಿವರ್ತಿಸುವ ಚಿಂತನೆ ಹೊಂದಿರುವುದಾಗಿ ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ತಿಳಿಸಿದ್ದಾರೆ.


ಅವರು ಇಂದು ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದೆ.


ಕೇರಳ ಮತ್ತು ಹಿಮಾಚಲ ಪ್ರದೇಶದಲ್ಲಿ ಈ ಯೋಜನೆ ಅನುಷ್ಠಾನಗೊಂಡಿದೆ. ಇದರಿಂದ ಸದನದ ಕಲಾಪವನ್ನು ಸಾರ್ವಜನಿಕರು ವೀಕ್ಷಿಸಿ ಸಮಸ್ಯೆ ತಿಳಿಸಲು ಅನುಕೂಲವಾಗಲಿದೆ ಎಂದು ಖಾದರ್ ತಿಳಿಸಿದ್ದಾರೆ.


ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠ ಗೊಳ್ಳಬೇಕಾದರೆ ವಿಧಾನಸಭಾ ಕಲಾಪಗಳು ಪರಿಣಾಮಕಾರಿಯಾಗಬೇಕು ಆಗ ಉತ್ತಮ ಶಾಸನಗಳು ಜಾರಿಯಾಗಬಹುದು. ವಿಧಾನ ಸಭಾ ಕಲಾಪ ವ್ಯರ್ಥ ವಾಗದಂತೆ ನಿಭಾಯಿಸುವ ಹೊಣೆಗಾರಿಕೆ ಇದೆ ಎಂದು ಯು.ಟಿ. ಖಾದರ್ ತಿಳಿಸಿದ್ದಾರೆ. ಸರಕಾರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ವಿಪಕ್ಷಗಳು ಕಲಾಪದಲ್ಲಿ ಸಮರ್ಪಕವಾಗಿ ಕಾರ್ಯ ನಿರ್ವಹಿಸುವುದು ಮುಖ್ಯ ವಾಗುತ್ತದೆ ಈ ನಿಟ್ಟಿನಲ್ಲಿ  ಸ್ಪೀಕರ್‌ನ ಪಾತ್ರವೂ ಮಹತ್ವದ್ದಾಗಿದೆ ಎಂದು ಅವರು ಹೇಳಿದರು.  


ಸದನದಲ್ಲಿ ಪರಸ್ಪರ ಆರೋಪ ಸಹಜ ಒಂದು ಈ ನಡುವೆ ಕಲಾಪವನ್ನು ನಿರ್ದಿಷ್ಟ ಗುರಿಯತ್ತ ತಲುಪಿಸುವ ಗುರಿ ಸ್ಪೀಕರ್ ಮೇಲಿರುತ್ತದೆ. ಮಸೂದೆಯ ಬಗ್ಗೆ ಉತ್ತಮ ರೀತಿಯ ಚರ್ಚೆ ನಡೆದು ಅದು ಕಾನೂನು ಆಗಿ ಜಾರಿಯಾದರೆ ಪ್ರಜೆಗಳಿಗೆ ಅನುಕೂಲ ವಾಗುತ್ತದೆ. ಸದನದಲ್ಲಿ ಹೊಸದಾಗಿ ಆಯ್ಕೆ ಯಾದ ಶಾಸಕರಿಗೆ  ಅವಕಾಶ ಕಲ್ಪಿಸಲು ಪ್ರಯತ್ನಿಸಿರುವುದಾಗಿ ತಿಳಿಸಿದ್ದಾರೆ.


ಮಾಧ್ಯಮ ಗೋಷ್ಠಿಯಲ್ಲಿ ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ  ಶ್ರೀನಿವಾಸ ನಾಯಕ್ ಇಂದಾಜೆ, ರಾಜ್ಯ ಸಮಿತಿಯ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ನಿಕಟಪೂರ್ವ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ರಾಮಕೃಷ್ಣ.ಆರ್ ಉಪಸ್ಥಿತರಿದ್ದರು. ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು. ಭಾಸ್ಕರ್ ರೈ ಕಟ್ಟ ವಂದಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top