ಆ.12: ನಿಟ್ಟೆಯ ಎನ್‌ಆರ್‌ಎಎಂ ಪಾಲಿಟೆಕ್ನಿಕ್ ಕಾಲೇಜಿನ ಹಳೆ ವಿದ್ಯಾರ್ಥಿಗಳ ಪುನರ್ಮಿಲನ

Upayuktha
0


ನಿಟ್ಟೆ: ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಆಗಸ್ಟ್ 12ರಂದು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮವನ್ನು ಆಯೋಜಿಸಿದೆ.


ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಕುಲಾಧಿಪತಿ ಎನ್.ವಿನಯ ಹೆಗ್ಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವರು. ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಟ್ರಸ್ಟಿ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಪ್ರೊ-ಚಾನ್ಸಲರ್ (ಆಡಳಿತ) ವಿಶಾಲ್ ಹೆಗ್ಡೆ ಮತ್ತು ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ ಆಫ್ ಕ್ಯಾಂಪಸ್ ಸೆಂಟರ್ ನ ಕ್ಯಾಂಪಸ್ ನಿರ್ವಹಣೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕ ಎ.ಯೋಗೀಶ್ ಹೆಗ್ಡೆ ಅವರು ಗೌರವ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವರು. ಕಾರ್ಯಕ್ರಮವು ಔಪಚಾರಿಕ ಸಭಾ ಕಾರ್ಯಕ್ರಮ, ಕ್ಯಾಂಪಸ್ ಭೇಟಿ, ಅಧ್ಯಾಪಕ-ಹಳೆಯ ವಿದ್ಯಾರ್ಥಿಗಳ ಸಂವಾದ, ಫೋಟೋಸ್, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೋಜಿನ ಆಟಗಳನ್ನೊಳಗೊಂಡು ರೂಪಿಸಲಾಗಿದೆ.


ಭಾರತದ ವಿವಿಧ ಭಾಗಗಳಿಂದ 400 ಕ್ಕೂ ಹೆಚ್ಚು ಹಳೆಯ ವಿದ್ಯಾರ್ಥಿಗಳು ಕ್ಯಾಂಪಸ್ ಗೆ ಭೇಟಿ ನೀಡುತ್ತಿರುವುದು ಹೆಮ್ಮೆಯ ಕ್ಷಣವಾಗಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಲ್ಯೂಮ್ನೈ ರಿಲೇಶನ್ಸ್ ವಿಭಾಗದ ನಿರ್ದೇಶಕ ಪ್ರೊ.ಪ್ರಸನ್ನ ಕೈಲಾಜೆ ಮತ್ತು ನಿಟ್ಟೆಯ ಎನ್.ಆರ್.ಎ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಪ್ರಶಾಂತ್ ಕುಮಾರ್ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಎನ್.ಆರ್.ಎ.ಎಂ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಈ ಕಾರ್ಯಕ್ರಮವನ್ನು ಸಂಯೋಜಿಸಲಿದ್ದಾರೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top