ಬದುಕು ರೂಪಿಸುವಲ್ಲಿ ರಾಷ್ಟ್ರೀಯ ಯೋಜನೆ ಬಹುಮುಖ್ಯ : ನಟೇಶ್ ಆಳ್ವ

Upayuktha
0

ಮೂಡುಬಿದಿರೆ: ಆಳ್ವಾಸ್ ಪದವಿಪೂರ್ವ ಕಾಲೇಜಿನ 2023-24ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಉದ್ಘಾಟನಾ ಕಾರ್ಯಕ್ರಮ ವಿದ್ಯಾಗಿರಿಯ ಶಿವರಾಮ ಕಾರಂತ ಸಭಾಂಗಣದಲ್ಲಿ ಶುಕ್ರವಾರ ನಡೆಯಿತು.


ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆಗಳನ್ನು ಉದ್ಘಾಟಿಸಿ ಮಾತಾನಾಡಿದ ಶ್ರೀ ರಾಮಕೃಷ್ಣ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರಾದ ನಟೇಶ್ ಆಳ್ವ ಬದುಕು ರೂಪಿಸಿಕೊಳ್ಳುವಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಪಾತ್ರ ಬಹುಮುಖ್ಯ. ಅನುಭವದೊಂದಿಗೆ ಕಾರ್ಯಪ್ರವೃತ್ತರಾಗಬೇಕು. ನಾಯಕತ್ವದ ಗುಣ, ವೈಚಾರಿಕತೆ, ಉತ್ತಮ ಸಂವಹನ, ಹಾಗೂ ವೈಜ್ಞಾನಿಕ ಮನೋಧರ್ಮದಿಂದ ನಮ್ಮನ್ನು ನಾವು ತಿದ್ದುವ ತೀಡುವ ಜನರಾಗಬೇಕು ಎಂದರು.


ಆಳ್ವಾಸ್ ಪದವಿ ಕಾಲೇಜಿನ ಪ್ರಾಂಶುಪಾಲ ಮೊಹಮ್ಮದ್ ಸದಾಕತ್ ಮಾತನಾಡಿ, ಪರೋಪಕಾರವೇ ಪುಣ್ಯದ ಕೆಲಸ ಇತರರನ್ನು ದಾರಿ ತಪ್ಪಿಸುವವರು ನಾವಾಗಬಾರದು ಅವರನ್ನು ಸರಿ ದಾರಿಯಲ್ಲಿ ಕೊಂಡೊಯ್ಯುವ ಸೇವಾಗುಣ ನಮ್ಮಲ್ಲಿರಬೇಕು. ಸೇವೆಯ ಹೆಸರಲ್ಲಿ ಸ್ವಾರ್ಥವಿರದೆ ಪ್ರಾಮಾಣಿಕ ಪ್ರಯತ್ನವಿರಬೇಕು. ಹೆತ್ತವರಿಗೆ ತಲೆಬಾಗಿ ನಡೆಯುವುದೇ ಒಂದರ್ಥದಲ್ಲಿ ಸೇವೆ ಎಂದರು.


ಕಾರ್ಯಕ್ರಮದಲ್ಲಿ ಕಾಲೇಜಿನ ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ.ಡಿ ಹಾಗೂ ಕಲಾ ವಿಭಾಗದ ಡೀನ್ ವೇಣುಗೋಪಾಲ ಶೆಟ್ಟಿ ಉಪಸ್ಥಿತರಿದ್ದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ತ್ರಿವೇಣಿ ವಂದಿಸಿದರು. ಯೋಜನಾಧಿಕಾರಿ ಅರುಣ್ ಕುಮಾರ್ ಸ್ವಾಗತಿಸಿ, ವಾಣಿಜ್ಯ ವಿಭಾಗದ ಉಪನ್ಯಾಸಕ ಶ್ರೀಧರ್ ಆರ್ ನಿರೂಪಿಸಿದರು.

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
To Top