ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ

Upayuktha
0

ಮೂಡುಬಿದಿರೆ: ಆಳ್ವಾಸ್ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು. ವಿದ್ಯಾಗಿರಿಯ ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದ ಮೂಡುಬಿದಿರೆಯ ಪೋಲಿಸ್ ನಿರೀಕ್ಷಕ ನಿರಂಜನ್ ಕುಮಾರ್, ಮಾದಕ ದ್ರವ್ಯಗಳ ಸೇವನೆಯಿಂದ ಮನಸ್ಸು ಹಾಗೂ ದೇಹ ಸಮತೋಲನ ಕಳೆದುಕೊಳ್ಳುತ್ತದೆ. ವಿದ್ಯಾರ್ಥಿಗಳು ಪದವಿಪೂರ್ವ ಹಂತದಲ್ಲಿ ಉತ್ತಮ ಕಲಿಕಾ ವಾತಾವರಣ ಬೆಳೆಸಿಕೊಂಡು ಮಾದಕ ವ್ಯಸನಗಳ ದುಷ್ಪರಿಣಾಮಗಳಿಂದ ದೂರವಿರಬೇಕು ಎಂದರು. 


ಆಳ್ವಾಸ್ ಆಯುರ್ವೇದ ಆಸ್ಪತ್ರೆಯ ಮನೋವಿಜ್ಞಾನ ಹಾಗೂ ಮಾನಸರೋಗ ವಿಭಾಗದ ವೈದ್ಯ ಡಾ. ರವಿಪ್ರಸಾದ್ ಹೆಗ್ಡೆ ಮಾತನಾಡಿ, ಮಾದಕ ವ್ಯಸನಿಗಳು ಸಮಾಜದಲ್ಲಿ ಕೆಟ್ಟ ಕೆಲಸಗಳನ್ನು ಮಾಡಲು ಮುಂದಾಗುತ್ತಾರೆ. ದೇಹದ ಆರೋಗ್ಯ ಮಾತ್ರವಲ್ಲದೇ ಮಾನಸಿಕವಾಗಿಯೂ ಖಿನ್ನತೆಗೆ ಒಳಗಾಗುತ್ತಾರೆ. ಸರ್ವ ರೋಗಕ್ಕೂ ಸರಾಯಿ ಮದ್ದು ಎಂಬ ತಪ್ಪು ಗ್ರಹಿಕೆಯಲ್ಲಿ ದುಷ್ಪರಿಣಾಮಗಳಿಗೆ ಬಲಿಯಾಗುತ್ತಾರೆ ಎಂದರು. 


ಕಾಲೇಜಿನ ಪ್ರಾಂಶುಪಾಲ ಮಹಮ್ಮದ್ ಸದಾಕತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪನಿರೀಕ್ಷಕ ಸಿದ್ದಪ್ಪ ಉಪಪ್ರಾಂಶುಪಾಲೆ ಜಾನ್ಸಿ ಪಿ. ಎನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ್ ಎಂ. ಡಿ ಹಾಗೂ ಕಾರ್ಯಕ್ರಮ ಸಂಯೋಜಕ ಗಣಪತಿ ನಾಯಕ್ ಉಪಸ್ಥಿತರಿದ್ದರು. ಕನ್ನಡ ವಿಭಾಗದ ಉಪನ್ಯಾಸಕಿ ಶ್ವೇತಾಶ್ರೀ ನಿರೂಪಿಸಿದರು, ಧರ್ಮೇಂದ್ರ ಕುದ್ರೋಳಿ ವಂದಿಸಿದರು.       

 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top