ಮಂಗಳೂರು ವಿಶ್ವವಿದ್ಯಾನಿಲಯ ಸಂಯೋಜಿತ ಕಾಲೇಜ್‌ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರುಗಳಿಗೆ ಸನ್ಮಾನ

Chandrashekhara Kulamarva
0
 
ಮೂಡುಬಿದಿರೆ: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಕಾಲೇಜು ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ.) ವತಿಯಿಂದ ಮಂಗಳೂರು ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ನಿರ್ದೇಶಕರಾಗಿ ಸೇವೆಯನ್ನು ಸಲ್ಲಿಸಿ ನಿವೃತ್ತರಾಗಿರುವ ಉಪನ್ಯಾಸಕರಿಗೆ ಸನ್ಮಾನ ಕಾರ್ಯಕ್ರಮ ಆಳ್ವಾಸ್ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು. 


ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರಾದ ಪೊಂಪೆ ಕಾಲೇಜಿನ ಜೇಮ್ಸ್ ಆಲಿವರ್, ಹೆಬ್ರಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರುಣ್ ಶೆಟ್ಟಿ, ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನ ಜಯರಾಮ್ ರೈ ಅವರ ಸೇವೆಯನ್ನು ಗುರುತಿಸಿ ಸನ್ಮಾನಿಸಿದರು.  


ವೇದಿಕೆಯಲ್ಲಿ ಮಂಗಳೂರು ವಿವಿ ಹಿಂದಿನ ಕುಲಸಚಿವ ಡಾ. ಕಿಶೋರ್ ಕುಮಾರ್ ಸಿ ಕೆ, ಮಂಗಳೂರು ವಿವಿ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜೆರಾಲ್ಡ್ ಸಂತೋಷ್ ಡಿಸೋಜ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಳೆಯಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಜಾನ್ ಪಿಂಟೊ ವಹಿಸಿದ್ದರು. ದೈಹಿಕ ಶಿಕ್ಷಕ ಎವರೆಸ್ಟ್ ರೋಡ್ರಿಗಸ್ ಸ್ವಾಗತಿಸಿ, ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಧು ಜಿ ಆರ್ ವಂದಿಸಿದರು. ಡಾ. ರಾಮಚಂದ್ರ ಪಾಟ್ಕರ್ ಇವರು ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

web counter   

إرسال تعليق

0 تعليقات
إرسال تعليق (0)
To Top