ಮಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯದ ಎಲ್ಲಾ ಸಂಸದರೂ ಹೆಚ್ಚು ಕ್ರಿಯಾಶೀಲರಾಗಿದ್ದಾರೆ. ದ.ಕ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಈ ಬಾರಿಯೂ ಲೋಕಸಭಾ ಎಲೆಕ್ಷನ್ ಟಿಕೆಟ್ ಆಕಾಂಕ್ಷಿಯಾಗಿದ್ದು ಸದ್ಯ ದ.ಕ ಜಿಲ್ಲೆಗೆ ಅನುದಾನಗಳ ಮಹಾಪೂರವನ್ನೇ ಹರಿಸುತ್ತಿದ್ದಾರೆ.
ಇತ್ತೀಚೆಗೆ ಅಂದರೆ ಅಗಸ್ಟ್ 6ರಂದು ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದ ನೂತನ ಕಟ್ಟಡಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಅವರು ಶಂಕುಸ್ಥಾಪನೆ ನೆರವೇರಿಸಿದ್ದು ಇದೀಗ ಮತ್ತೆ ಎರಡು ರೈಲ್ವೆ ನಿಲ್ದಾಣದ ನೀಲನಕಾಶೆ ತಯಾರಾಗಿದೆ.
ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ್ದ ಸಂಸದರು, ಶೀಘ್ರದಲ್ಲೇ ಮತ್ತೇ ಮೂರು ರೈಲ್ವೆ ನಿಲ್ದಾಣದ ನೂತನ ಕಟ್ಟಡ ನಿರ್ಮಾಣ ಆಗಲಿದೆ ಎಂದಿದ್ದರು. ಇದೀಗ ಕೆಲವೇ ದಿನಗಳಲ್ಲಿ ಆ ಎರಡು ರೈಲ್ವೆ ನಿಲ್ದಾಣದ ನೀಲನಕಾಶೆ ತಯಾರಾಗಿದೆ.
ಅಮೃತ್ ಭಾರತ್ ಯೋಜನೆಯಡಿಯಲ್ಲಿ ಬಂಟ್ವಾಳ ರೈಲ್ವೆ ನಿಲ್ಧಾಣಕ್ಕೆ 26.19 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ರೈಲ್ವೆ ನಿಲ್ದಾಣ ಕಟ್ಟಡ ತಲೆ ಎತ್ತಲಿದೆ.
ಮತ್ತು ಸುಬ್ರಹ್ಮಣ್ಯ ರೈಲ್ವೆ ನಿಲ್ದಾಣಕ್ಕೆ 24.73 ಕೋಟಿ ರೂಪಾಯಿ ಯೋಜನೆ ಮೂಲಕ ಸುಂದರ ರೈಲ್ವೆ ನಿಲ್ದಾಣ ಕಟ್ಟಡ ತಲೆ ಎತ್ತಲಿದೆ. ಅದ್ಬುತ ವಿನ್ಯಾಸ ಹೊಂದಿರುವ ಈ ಎರಡೂ ರೈಲ್ವೇ ನಿಲ್ದಾಣದ ಶಿಲಾನ್ಯಾಸ ಕಾರ್ಯಕ್ರಮವು ಅತೀ ಶೀಘ್ರದಲ್ಲೇ ನಡೆಯಲಿದ್ದು ಆದಷ್ಟು ಬೇಗ ಲೋಕಾರ್ಪಣೆಗೊಳಿಸುತ್ತೇವೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ