ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ವಚನ ಜ್ಯೋತಿ ಬಳಗ ಮತ್ತು ಲಯನ್ಸ್ ಕ್ಲಬ್ ಆಫ್ ಜ್ಞಾನಯೋಗ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ವಿಜಯನಗರದ ವಾಟರ್ ಟ್ಯಾಂಕ್ ಹತ್ತಿರ ಇರುವ ಡಾ. ಚಿದಾನಂದಮೂರ್ತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಗಾನಗಂಗಾ ಸಂಗೀತ ವಿದ್ಯಾಲಯದ ಗೀತಾ ಭತ್ತದ್, ಮೀನಾಕ್ಷಿ ಮೇಟಿ, ಕು. ತಾನ್ವಿ ತಾರಾ, ಕು. ಪೂರ್ಣಿಮಾ ಇವರುಗಳು ನಡೆಸಿಕೊಟ್ಟ ಸುಗಮ ಸಂಗೀತ ಕಾರ್ಯಕ್ರಮವು ನೆರೆದಿದ್ದ ಕಲಾಭಿಮಾನಿಗಳ ಮನಸೂರೆಗೊಂಡಿತು.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ವಚನ ಜ್ಯೋತಿ ಸಂಘದ ಅಧ್ಯಕ್ಷರಾದ ಶ್ರೀ ಎಸ್. ಪಿನಾಕಪಾಣಿ ಮತ್ತು ಇತರ ಗಣ್ಯವ್ಯಕ್ತಿಗಳು ಆಗಮಿಸಿದ್ದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ