ಅದೇ ರೀತಿ ಕಾರ್ಯಕ್ರಮದಲ್ಲಿ ಹಾಜರಿದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಸಿಬ್ಬಂದಿ ಹನಮಂತ ಇವರು ರಸ್ತೆ ಸುರಕ್ಷತೆ ಹಾಗೂ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮೊಬೈಲ್ ಬಳಕೆಯ ಕುರಿತು ಉಪಯುಕ್ತ ಮಾಹಿತಿಯನ್ನು ನೀಡಿದರು. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಇತರ ಸಿಬ್ಬಂದಿಗಳಾದ ಅಜಯ್ ಹಾಗೂ ಸಹದೇವ್ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಉದಯಕುಮಾರ್ ಇವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀನಿವಾಸ ನಾಯ್ಕ ಪ್ರಾಸ್ತಾವಿಕ ಮತುಗಳೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು. ಎನ್ಎಸ್ಎಸ್ ಸಂಯೋಜನಾಧಿಕಾರಿ ಶೀನಪ್ಪ ಎನ್ ವಂದಿಸಿದರು. ಕನ್ನಡ ಉಪನ್ಯಾಸಕರಾದ ಸಂಜಯ್ ಬಿ ಎಸ್ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ